ಕೊರೊನಾ ನಿಯಮ ಪಾಲಿಸಿ ಮತದಾನ ಮಾಡಿ : ಬಿಹಾರ ಜನತೆಗೆ ಪ್ರಧಾನಿ, ಗಣ್ಯರ ಕರೆ

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ/ಪಾಟ್ನಾ , ಅ.28- ಬಿಹಾರ ವಿಧಾನಸಭೆಗೆ ಇಂದು ಮೊದಲ ಹಂತದ ಮತದಾನ ಆರಂಭಕ್ಕೂ ಮುನ್ನ ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ವಿವಿಧ ಪಕ್ಷಗಳ ಧುರೀಣರು ಕೊರೊನಾ ನಿಯಂತ್ರಣ ನಿಯಮ ಪಾಲಿಸಿ ತಮ್ಮ ಹಕ್ಕುಗಳನ್ನು ಚಲಾಯಿಸುವಂತೆ ಮತದಾರರಿಗೆ ಕರೆ ನೀಡಿದ್ದಾರೆ.

ಪ್ರಧಾನಿ ಅವರಲ್ಲದೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಲೋಕ ಜನಶಕ್ತಿ ಪಕ್ಷದ ನಾಯಕ ಚಿರಾಗ್ ಪಾಸ್ವಾನ್, ಆರ್‍ಜೆಡಿ ಮುಖಂಡ ತೇಜಸ್ವಿ ಸಿಂಗ್ ಯಾದವ್ ಹಾಗೂ ಇತರ ಪಕ್ಷಗಳ ನಾಯಕರು ಮತದಾರರಿಗೆ ಸಂದೇಶ ನೀಡಿದ್ದಾರೆ.

ಮತದಾರರು ಪ್ರಜಾಪ್ರಭುತ್ವದ ಹಬ್ಬದಲ್ಲಿ ಸಕ್ರಿಯವಾಗಿ ಭಾಗವಹಿಸಿ ತಮ್ಮ ಹಕ್ಕುಗಳನ್ನು ಚಲಾಯಿಸಬೇಕು. ಕೊರೊನಾ ಹಾವಳಿ ನಿಯಂತ್ರಣಕ್ಕಾಗಿ ಜಾರಿಯಲ್ಲಿರುವ ನಿಯಮಗಳನ್ನು ಪಾಲಿಸಿ ಪವಿತ್ರ ಮತದಾನ ಮಾಡುವಂತೆ ಗಣ್ಯರು ಬಿಹಾರದ ಜನತೆಗೆ ಮನವಿ ಮಾಡಿದ್ದಾರೆ.

ಈ ಕುರಿತು ಮುಂಜಾನೆಯೇ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ ಎರಡು ಗಜ ದೂರ ನಿಂತು, ಮಾಸ್ಕ್ ಧರಿಸಿ ಪ್ರಜÁಪ್ರಭುತ್ವ ಹಬ್ಬದಲ್ಲಿ ಮತದಾನ ಮಾಡಿ ಎಂದು ಕರೆ ನೀಡಿದ್ದಾರೆ.

Facebook Comments