ಬೈಕ್ ಕಳ್ಳತನ : ಆರೋಪಿ ಬಂಧನ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಮಾ.29- ಮನೆ ಮುಂದೆ ನಿಲ್ಲಿಸಿದ್ದ ಸ್ಕೂಟರ್ ಕಳ್ಳತನ ಮಾಡಿದ್ದ ಆರೋಪಿಯನ್ನು ಅನ್ನಪೂರ್ಣೇಶ್ವರಿನಗರ ಠಾಣೆ ಪೊಲೀಸರು ಬಂಧಿಸಿ 2.50 ಲಕ್ಷ ರೂ. ಬೆಲೆಯ 5 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಡಿ ಗ್ರೂಪ್ ಲೇಔಟ್ ನಿವಾಸಿ ನವೀನ್‍ಕುಮಾರ್(19) ಬಂಧಿತ ಆರೋಪಿ.

ತಿಮ್ಮನಪಾಳ್ಯದ ಮನೆಯೊಂದರ ಮುಂದೆ ಫೆ.14ರಂದು ನಿಲ್ಲಿಸಿದ್ದ ಹೊಂಡಾ ಆಕ್ಟಿವಾ ಸ್ಕೂಟರ್ ಕಳವು ಮಾಡಿಕೊಂಡು ಹೋಗಿದ್ದ ಬಗ್ಗೆ ಅನ್ನಪೂರ್ಣೇಶ್ವರಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇನ್‍ಸ್ಪೆಕ್ಟರ್ ಶ್ರೀನಿವಾಸ್ ಹಾಗೂ ಸಿಬ್ಬಂದಿ ತನಿಖೆ ಕೈಗೊಂಡು ಆರೋಪಿಯನ್ನು ಬಂಧಿಸಿ ವಿಚಾರಣೆಗೊಳಪಡಿಸಿ, ಈ ಪ್ರಕರಣ ಸೇರಿದಂತೆ ಚಂದ್ರಲೇಔಟ್, ಬ್ಯಾಡರಹಳ್ಳಿ, ತಾವರೆಕೆರೆ ಮತ್ತು ಮಾದನಾಯಕನಹಳ್ಳಿ ಠಾಣೆ ವ್ಯಾಪ್ತಿಗಳಲ್ಲಿ ಕಳವು ಮಾಡಿದ್ದ 5 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳುವಲ್ಲಿ ಅನ್ನಪೂಣೇಶ್ವರಿನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.

Facebook Comments