ಆಂಧ್ರದಲ್ಲಿ ಕದ್ದ ಬೈಕ್ ಬೆಂಗಳೂರಿನಲ್ಲಿ ಮಾರುತ್ತಿದ್ದ ಎಂಜಿನಿಯರಿಂಗ್ ಪದವೀಧರ ಅರೆಸ್ಟ್

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ನ.25- ಆಂಧ್ರ ಪ್ರದೇಶದಲ್ಲಿ ಕಳ್ಳತನ ಮಾಡಿದ ಬೈಕ್‍ಗಳನ್ನು ಕರ್ನಾಟಕದಲ್ಲಿ ಹಾಗೂ ಆಂಧ್ರದಲ್ಲಿ ಕಳ್ಳತನ ಮಾಡಿದ್ದ ಬೈಕ್‍ಗಳನ್ನು ಕರ್ನಾಟಕಕ್ಕೆ ತಂದು ಮಾರಾಟ ಮಾಡಿ ಬಂದ ಹಣದಲ್ಲಿ ಐಷಾರಾಮಿ ಜೀವನ ನಡೆಸುತ್ತಿದ್ದ ಕುಖ್ಯಾತ ಅಂತಾರಾಜ್ಯ ಬೈಕ್ ಕಳ್ಳನನ್ನು ಬಂಡೆಪಾಳ್ಯ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಆರೋಪಿಯು ಡಿಪ್ಲಮೋ ಇನ್ ಸಿವಿಲ್ ಎಂಜಿನಿಯರಿಂಗ್ ತಾಂತ್ರಿಕ ವಿದ್ಯಾಭ್ಯಾಸ ಪೂರ್ಣಗೊಳಿಸಿದ್ದರೂ ಸಹ ಯಾವುದೇ ಉದ್ಯೋಗವಿಲ್ಲದ ಕಾರಣ ಕಳ್ಳತನವನ್ನೇ ವೃತ್ತಿಯನ್ನಾಗಿ ಮಾಡಿಕೊಂಡಿದ್ದುದು ಪೊಲೀಸರ ವಿಚಾರಣೆಯಿಂದ ತಿಳಿದುಬಂದಿದೆ. ಆರೋಪಿಯಿಂದ 15 ಲಕ್ಷ ರೂ. ಬೆಲೆಬಾಳುವ 5 ರಾಯಲ್ ಎನ್‍ಫೀಲ್ಡ್ ಬೈಕ್, ಯಮಹ, 4 ಬಜಾಜ್ ಪಲ್ಸರ್ ಬೈಕ್ ಸೇರಿದಂತೆ ಒಟ್ಟು 10 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.

ಆರೋಪಿಯ ಬಂಧನದಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸೂರ್ಯನಗರ ಪೊಲೀಸ್ ಠಾಣೆಯ 2 ಪ್ರಕರಣ, ಹೆಬ್ಬಗೋಡಿ 1, ಪರಪ್ಪನ ಅಗ್ರಹಾರ 2, ಆಂಧ್ರ ಪ್ರದೇಶದ ಬದ್ವೇಲ್ ಪೊಲೀಸ್ ಠಾಣೆಯ 2, ತಿರುಪತಿ ಈಸ್ಟ್ ಠಾಣೆಯ 2 ಬೈಕ್ ಕಳವು ಪ್ರಕರಣ ಹಾಗೂ ವಿಜಯವಾಡ ಟೌನ್ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿನ 1 ಪ್ರಕರಣ ಸೇರಿದಂತೆ ಒಟ್ಟು 10 ಪ್ರಕರಣಗಳನ್ನು ಪತ್ತೆಹಚ್ಚುವಲ್ಲಿ ಬಂಡೆಪಾಳ್ಯ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.

ಬೆಂಗಳೂರಿನಲ್ಲಿ ಕಳವು ಮಾಡಿದ್ದ ಬೈಕ್‍ಗಳನ್ನು ಆಂಧ್ರ ಪ್ರದೇಶಕ್ಕೆ ಹಾಗೂ ಅಲ್ಲಿ ಕಳವು ಮಾಡಿದ್ದ ದ್ವಿಚಕ್ರ ವಾಹನಗಳನ್ನು ನಗರಕ್ಕೆ ತಂದು ಮಾರಾಟ ಮಾಡುತ್ತಿದ್ದ ಜಾಲದ ಬಗ್ಗೆ ಬಂಡೆಪಾಳ್ಯ ಠಾಣೆ ಪೊಲೀಸರು ಕಾರ್ಯಾಚರಣೆ ಕೈಗೊಂಡಿದ್ದರು.

ಆಂಧ್ರ ಪ್ರದೇಶದಲ್ಲಿ ಕಳವು ಮಾಡಿದ್ದ ಬೈಕೊಂದನ್ನು ನಗರದ ಕೂಡ್ಲು ಗೇಟ್‍ನಲ್ಲಿ ಮಾರಾಟ ಮಾಡಲು ಬಂದಾಗ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಕಾರ್ಯಾಚರಣೆಯನ್ನು ಆಗ್ನೇಯ ವಿಭಾಗದ ಉಪ ಪೊಲೀಸ್ ಆಯುಕ್ತ ಶ್ರೀನಾಥ್ ಮಹದೇವ್ ಜೋಷಿ ಮಾರ್ಗದರ್ಶನದಲ್ಲಿ ಸಹಾಯಕ ಪೊಲೀಸ್ ಆಯುಕ್ತ ಪವನ್, ಇನ್ಸ್‍ಪೆಕ್ಟರ್ ರಾಜೇಶ್ ಅವರ ನೇತೃತ್ವದ ತಂಡ ಆರೋಪಿಗಳನ್ನು ಬಂಸುವಲ್ಲಿ ಯಶಸ್ವಿಯಾಗಿದೆ.

Facebook Comments