ತಲ್ವಾರ್ ಹಿಡಿದು ಹುಟ್ಟುಹಬ್ಬ ಆಚರಿಕೊಂಡ ಬಿಜೆಪಿ ಮುಖಂಡ

ಈ ಸುದ್ದಿಯನ್ನು ಶೇರ್ ಮಾಡಿ

ಕಲಬುರಗಿ,ಆ.22- ಜೇವರ್ಗಿ ತಾಲೂಕು ಶ್ರೀರಾಮಸೇನೆ ಅಧ್ಯಕ್ಷ, ಬಿಜೆಪಿ ಮುಖಂಡ ತಲ್ವಾರ್‍ನಿಂದ ಕೇಕ್ ಕತ್ತರಿಸಿ ತನ್ನ ಹುಟ್ಟುಹಬ್ಬ ಆಚರಿಸಿಕೊಳ್ಳುವ ಮೂಲಕ ವಿವಾದ ಹುಟ್ಟುಹಾಕಿದ್ದಾರೆ.

ವಿಜಯಪುರ ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರೊಬ್ಬರು ತಲ್ವಾರ್‍ನಿಂದ ಕೇಕ್ ಕತ್ತರಿಸಿ ವಿವಾದ ಸೃಷ್ಠಿಸಿದ್ದ ಬೆನ್ನಲ್ಲೇ ಎರಡು ದಿನಗಳ ಹಿಂದೆ ಬಿಜೆಪಿ ಮುಖಂಡ ಶರಣ ಕೋಳಕುರ ತಲ್ವಾರ್ ಹಿಡಿದು ಕೇಕ್ ಕಟ್ ಮಾಡಿ ಹುಟ್ಟುಹಬ್ಬ ಆಚರಿಸಿಕೊಂಡು ಸಂಭ್ರಮಿಸಿರುವುದು ಈಗ ಸುದ್ದಿಯಾಗಿದೆ.

ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಕಾಂಗ್ರೆಸ್ ಕಾರ್ಯಕರ್ತರು ಈ ರೀತಿ ವಿಲಕ್ಷಣವಾಗಿ ವರ್ತಿಸಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿ ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿತ್ತು.

ಈಗ ಬಿಜೆಪಿ ಅಧಿಕಾರಕ್ಕೆ ಬರುತ್ತಿದ್ದಂತೆ ಬಿಜೆಪಿಯ ಆಟಾಟೋಪಗಳು ಹೊರಬರುತ್ತಿವೆ ಎಂದು ಜನ ಮಾತನಾಡಿಕೊಳ್ಳುತ್ತಿದ್ದಾರೆ.

Facebook Comments