ದೇಶಾದ್ಯಂತ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ..!

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ, ಮೇ 23- ನರೇಂದ್ರ ಮೋದಿ ನೇತೃತ್ವದ ಭಾರತೀಯ ಜನತಾ ಪಕ್ಷ ಸ್ಪಷ್ಟ ಬಹುಮತದೊಂದಿಗೆ ಕೇಂದ್ರದಲ್ಲಿ ಅಧಿಕಾರಕ್ಕೆ ಬರಲು ಸಜ್ಜಾಗುತ್ತಿದ್ದು , ದೇಶದೆಲ್ಲೆಡೆ ಬಿಜೆಪಿ ಕಾರ್ಯಕರ್ತರು ಸಡಗರ-ಸಂಭ್ರಮದಿಂದ ವಿಜಯೋತ್ಸವ ಆಚರಿಸುತ್ತಿದ್ದಾರೆ.

ಇಂದು ಬೆಳಗ್ಗೆ ಚುನಾವಣಾ ಮತ ಎಣಿಕೆ ಕಾರ್ಯ ಆರಂಭವಾಗಿ ಬಿಜೆಪಿ ಮುನ್ನಡೆ ಸಾಧಿಸಿದ ಆರಂಭಿಕ ಫಲಿತಾಂಶದಿಂದ ಉತ್ಸಾಹಗೊಂಡ ಕಾರ್ಯಕರ್ತರು ಎಲ್ಲೆಡೆ ಸಂಭ್ರಮದಿಂದ ಗೆಲುವಿನ ಸವಿಯನ್ನು ಆಚರಿಸಿದರು. [ LOKSABHA ELECTIONS 2019 RESULT – Live Updates]

ಪರಸ್ಪರ ಸಿಹಿ ವಿತರಿಸಿದ ಅಸಂಖ್ಯಾತ ಕಾರ್ಯಕರ್ತರು ನೃತ್ಯ ಮಾಡುತ್ತಾ ವಿಜಯೋತ್ಸವ ಆಚರಿಸಿದರು. ಅವರಲ್ಲಿ ಅಮಿತೋತ್ಸಾಹ ಎದ್ದು ಕಾಣುತ್ತಿತ್ತು. ನರೇಂದ್ರ ಮೋದಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಮತ್ತು ಪಕ್ಷದ ಹಿರಿಯ ನಾಯಕರ ಭಾವಚಿತ್ರಗಳನ್ನು ಹಿಡಿದಿದ್ದ ಕಾರ್ಯಕರ್ತರ ಜಯಘೋಷ ಮಾರ್ದನಿಸಿತು. ವಿಜಯದ ಸಂಕೇತ ಪ್ರದರ್ಶಿಸಿದ್ದ ಅವರಲ್ಲಿ ಸಂತಸ ಮನೆ ಮಾಡಿತ್ತು.

ಹರ್ ಹರ್ ಮೋದಿ, ಅಮಿತ್ ಷಾ ಕೀ ಜೈ , ಔರ್ ಪಿರ್ ಏಕ್ ಬಾರ್ ಮೋದಿ ಸರ್ಕಾರ್ ಎಂಬ ಜಯಘೋಷಗಳನ್ನು ಕೂಗಿದ ಕಾರ್ಯಕರ್ತರು ಕೇಸರಿ ಧ್ವಜಗಳನ್ನು ಹಿಡಿದು ಸಂಭ್ರಮಿಸಿದ್ದರು. ಅವರ ಸಂತೋಷಕ್ಕೆ ಪಾರವೇ ಇರಲಿಲ್ಲ.

Facebook Comments

Sri Raghav

Admin