Saturday, April 20, 2024
Homeರಾಷ್ಟ್ರೀಯಬಿಜೆಪಿ 370 ಮತ್ತು ಎನ್‍ಡಿಎ 400ಕ್ಕೂ ಹೆಚ್ಚು ಸ್ಥಾನ ಫಿಕ್ಸ್ : ಅಮಿತ್ ಶಾ

ಬಿಜೆಪಿ 370 ಮತ್ತು ಎನ್‍ಡಿಎ 400ಕ್ಕೂ ಹೆಚ್ಚು ಸ್ಥಾನ ಫಿಕ್ಸ್ : ಅಮಿತ್ ಶಾ

ನವದೆಹಲಿ,ಫೆ.10-ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 370 ಮತ್ತು ಎನ್‍ಡಿಎ 400ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸತತ ಮೂರನೇ ಅವಧಿಗೆ ಸರ್ಕಾರ ರಚಿಸಲಿದೆ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇಟಿ ನೌ ಗ್ಲೋಬಲ್ ಬಿಸಿನೆಸ್ ಶೃಂಗಸಭೆ 2024ರಲ್ಲಿ ಮಾತನಾಡಿದ ಅವರು, ಲೋಕಸಭೆ ಚುನಾವಣೆಯ ಫಲಿತಾಂಶದ ಬಗ್ಗೆ ಯಾವುದೇ ಕುತೂಹಲ ಇಲ್ಲ. ಕಾಂಗ್ರೆಸ್ ಹಾಗೂ ಇತರ ಪಕ್ಷಗಳು ತಾವು ಮತ್ತೆ ವಿರೋಧ ಪಕ್ಷದ ಸ್ಥಾನಗಳಲ್ಲಿ ಕುಳಿತುಕೊಳ್ಳಬೇಕಾಗುತ್ತದೆ ಎಂಬುದನ್ನು ಅರಿತುಕೊಂಡಿವೆ ಎಂದು ವ್ಯಂಗ್ಯವಾಡಿದರು.

ನಾವು ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ಸಂವಿಧಾನದ 370 ನೇ ವಿಧಿಯನ್ನು ರದ್ದುಗೊಳಿಸಿದ್ದೇವೆ. ಆದ್ದರಿಂದ ದೇಶದ ಜನರು ಬಿಜೆಪಿಗೆ 370 ಸ್ಥಾನಗಳನ್ನು ಮತ್ತು ಎನ್‍ಡಿಎಗೆ 400ಕ್ಕೂ ಹೆಚ್ಚು ಸ್ಥಾನಗಳನ್ನು ನೀಡಿ ಆಶೀರ್ವದಿಸುತ್ತಾರೆ ಎಂಬ ಭರವಸೆ ಇದೆ ಎಂದರು. ಜಯಂತ್ ಚೌಧರಿ ನೇತೃತ್ವದ ರಾಷ್ಟ್ರೀಯ ಲೋಕದಳ (ಆರೆಲ್‍ಡಿ), ಶಿರೋಮಣಿ ಅಕಾಲಿದಳ (ಎಸ್‍ಎಡಿ) ಮತ್ತು ಇತರ ಕೆಲವು ಪ್ರಾದೇಶಿಕ ಪಕ್ಷಗಳು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‍ಡಿಎ)ಗೆ ಸೇರುವ ಸಾಧ್ಯತೆಯ ಕುರಿತು ಕೇಳಲಾದ ಪ್ರಶ್ನೆಗೆ ಬಿಜೆಪಿ, ಕುಟುಂಬ ಯೋಜನೆಯಲ್ಲಿ ನಂಬಿಕೆ ಇದೆ. ಆದರೆ ರಾಜಕೀಯದಲ್ಲಿ ಅಲ್ಲ.ಎಸ್‍ಎಡಿ ಜೊತೆ ಮಾತುಕತೆಗಳು ನಡೆಯುತ್ತಿವೆ ಆದರೆ ಯಾವುದನ್ನೂ ಅಂತಿಮಗೊಳಿಸಲಾಗಿಲ್ಲ ಎಂದು ಹೇಳಿದರು.

2024ರ ಚುನಾವಣೆಯು ಎನ್‍ಡಿಎ ಮತ್ತು ಭಾರತದ ವಿರೋಧ ಪಕ್ಷದ ನಡುವಿನ ಚುನಾವಣೆಯಾಗಿರುವುದಿಲ್ಲ, ಆದರೆ ಅಭಿವೃದ್ಧಿ ಮತ್ತು ಕೇವಲ ಘೋಷಣೆಗಳನ್ನು ನೀಡುವವರ ನಡುವಿನ ಚುನಾವಣೆಯಾಗಲಿದೆ.ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಯ ಕುರಿತು ಕೇಳಿದ ಪ್ರಶ್ನೆಗೆ, 1947ರಲ್ಲಿ ದೇಶ ವಿಭಜನೆಗೆ ಅವರ ಪಕ್ಷವೇ ಕಾರಣವಾದ ಕಾರಣ ನೆಹರು-ಗಾಂಧಿ ವಂಶಸ್ಥರಿಗೆ ಅಂತಹ ಮೆರವಣಿಗೆಯನ್ನು ಮುಂದುವರಿಸಲು ಯಾವುದೇ ಹಕ್ಕಿಲ್ಲ ಎಂದು ತರಾಟೆಗೆ ತೆಗೆದುಕೊಂಡರು.

ಇಂಗ್ಲೆಂಡ್ ವಿರುದ್ಧದ ಟೆಸ್ಟ್‌ ಸರಣಿಯ ಉಳಿದ ಪಂದ್ಯಗಳಿಂದ ಹೊರಗುಳಿದ ಕೊಹ್ಲಿ

ಸಂಸತ್ತಿನಲ್ಲಿ ಸರ್ಕಾರವು ಮಂಡಿಸಿದ ಶ್ವೇತಪತ್ರದ ಸಮಯದ ಕುರಿತು, 2014ರಲ್ಲಿ ಅಧಿಕಾರವನ್ನು ಕಳೆದುಕೊಂಡಾಗ ಕಾಂಗ್ರೆಸ್ ನೇತೃತ್ವದ ಯುಪಿಎ ಯಾವ ಗೊಂದಲವನ್ನು ಬಿಟ್ಟಿದೆ ಎಂಬುದನ್ನು ತಿಳಿದುಕೊಳ್ಳುವ ಸಂಪೂರ್ಣ ಹಕ್ಕು ದೇಶಕ್ಕೆ ಇದೆ. ಆ ಸಮಯದಲ್ಲಿ (2014) ಆರ್ಥಿಕತೆಯು ಕೆಟ್ಟ ಸ್ಥಿತಿಯಲ್ಲಿತ್ತು, ಎಲ್ಲೆಡೆ ಹಗರಣಗಳು ನಡೆಯುತ್ತಿದ್ದವು, ವಿದೇಶಿ ಹೂಡಿಕೆ ಬರುತ್ತಿರಲಿಲ್ಲ, ಆ ಸಮಯದಲ್ಲಿ ನಾವು ಶ್ವೇತಪತ್ರವನ್ನು ಹೊರತಂದಿದ್ದರೆ ಅದು ಜಗತ್ತಿಗೆ ತಪ್ಪು ಸಂದೇಶವನ್ನು ನೀಡುತ್ತಿತ್ತು.

10 ವರ್ಷಗಳ ನಂತರ ನಮ್ಮ ಸರ್ಕಾರ ಆರ್ಥಿಕತೆಯನ್ನು ಪುನರುಜ್ಜೀವನಗೊಳಿಸಿದೆ, ವಿದೇಶಿ ಹೂಡಿಕೆಯನ್ನು ತಂದಿದೆ ಮತ್ತು ಯಾವುದೇ ಭ್ರಷ್ಟಾಚಾರವಿಲ್ಲ. ಆದ್ದರಿಂದ ಶ್ವೇತಪತ್ರವನ್ನು ಪ್ರಕಟಿಸಲು ಇದು ಸರಿಯಾದ ಸಮಯ ಎಂದು ಅವರು ಪ್ರತಿಪಾದಿಸಿದರು.

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ಕುರಿತು ಮಾತನಾಡಿದ ಅಮಿತ್ ಷಾ, ರಾಮ ಜನ್ಮ ಸ್ಥಳದಲ್ಲಿಯೇ ಮಂದಿರ ನಿರ್ಮಾಣವಾಗಬೇಕು ಎಂಬುದು ದೇಶದ ಜನತೆ 500-550 ವರ್ಷಗಳಿಂದ ನಂಬಿದ್ದರು. ಆದರೆ, ತುಷ್ಟೀಕರಣ ರಾಜಕಾರಣ ಮತ್ತು ಕಾನೂನು ಸುವ್ಯವಸ್ಥೆಯನ್ನು ಮುಂದಿಟ್ಟುಕೊಂಡು ರಾಮಮಂದಿರ ನಿರ್ಮಾಣಕ್ಕೆ ಅವಕಾಶ ಸಿಕ್ಕಿರಿಲಿಲ್ಲ ಎಂದರು.

ಪೌರತ್ವ (ತಿದ್ದುಪಡಿ) ಕಾಯಿದೆ (ಸಿಎಎ) ಕುರಿತು, 2019 ರಲ್ಲಿ ಜಾರಿಗೊಳಿಸಲಾದ ಕಾನೂನನ್ನು ಈ ನಿಟ್ಟಿನಲ್ಲಿ ನಿಯಮಗಳನ್ನು ಹೊರಡಿಸಿದ ನಂತರ ಲೋಕಸಭೆ ಚುನಾವಣೆಗೆ ಮೊದಲು ಜಾರಿಗೆ ತರಲಾಗುವುದು.ನಮ್ಮ ಮುಸ್ಲಿಂ ಸಹೋದರರನ್ನು ದಾರಿತಪ್ಪಿಸಲಾಗುತ್ತಿದೆ ಮತ್ತು ಪ್ರಚೋದಿಸಲಾಗುತ್ತಿದೆ (ಸಿಎಎ ವಿರುದ್ಧ) ಸಿಎಎ ಕೇವಲ ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದಲ್ಲಿ ಕಿರುಕುಳವನ್ನು ಎದುರಿಸಿ ಭಾರತಕ್ಕೆ ಬಂದವರಿಗೆ ಪೌರತ್ವವನ್ನು ನೀಡಲು ಉದ್ದೇಶಿಸಲಾಗಿದೆ. ಇದು ಯಾರೊಬ್ಬರ ಭಾರತೀಯ ಪೌರತ್ವವನ್ನು ಕಸಿದುಕೊಳ್ಳಲು ಅಲ್ಲ, ಎಂದು ಅವರು ಗೊಂದಲಗಳಿಗೆ ತೆರೆ ಎಳೆಯುವ ಪ್ರಯತ್ನ ಮಾಡಿದರು.

ಇಪಿಎಫ್ ಗರಿಷ್ಠ ಬಡ್ಡಿದರ ಶೇ.8.25ಕ್ಕೆ ನಿಗದಿ

ಏಕರೂಪ ನಾಗರಿಕ ಸಂಹಿತೆಯ ಕುರಿತು, ಇದು ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಮತ್ತು ಇತರರು ಸಹಿ ಮಾಡಿದ ಸಾಂವಿಧಾನಿಕ ಕಾರ್ಯಸೂಚಿಯಾಗಿದೆ.ಆದರೆ ಕಾಂಗ್ರೆಸ್ ತುಷ್ಟೀಕರಣದ ಕಾರಣದಿಂದ ಅದನ್ನು ನಿರ್ಲಕ್ಷಿಸಿದೆ. ಉತ್ತರಾಖಂಡದಲ್ಲಿ ಯುಸಿಸಿ ಜಾರಿ ಸಾಮಾಜಿಕ ಬದಲಾವಣೆಯಾಗಿದೆ. ಇದನ್ನು ಎಲ್ಲಾ ವೇದಿಕೆಗಳಲ್ಲಿ ಚರ್ಚಿಸಲಾಗುವುದು ಮತ್ತು ಕಾನೂನು ಪರಿಶೀಲನೆ ಎದುರಿಸಬೇಕಾಗುತ್ತದೆ. ಜಾತ್ಯತೀತ ದೇಶವು ಧರ್ಮ ಆಧಾರಿತ ನಾಗರಿಕ ಸಂಹಿತೆಗಳನ್ನು ಹೊಂದಲು ಸಾಧ್ಯವಿಲ್ಲ ಎಂದು ಅಮಿತ್ ಷಾ ಅವರು ಹೇಳಿದರು.

RELATED ARTICLES

Latest News