‘ಸಾಹುಕಾರ್’ಗೆ ಬುದ್ದಿಕಲಿಸಲು ಬಿಜೆಪಿ ವರಿಷ್ಠರ ಚಿಂತನೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ನ.28- ವಿಧಾನ ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಆಗಿರುವ ಸಹೋದರ ಲಖನ್ ಜಾರಕಿಹೊಳಿಗೆ ಪರೋಕ್ಷ ಬೆಂಬಲ ನೀಡುತ್ತಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಶಿಸ್ತುಕ್ರಮಕ್ಕೆ ಬಿಜೆಪಿ ವರಿಷ್ಠರು ಚಿಂತನೆ ನಡೆಸಿದ್ದಾರೆಂದು ತಿಳಿದು ಬಂದಿದೆ
.
ದೇವಸ್ಥಾನಗಳಿಗೆ ಜಾರಕಿಹೊಳಿ ಸಹೋದರರ ಭೇಟಿಮೊದಲ ಮತ ಬಿಜೆಪಿಗೆ ಎರಡನೇ ಮತ ಕಾಂಗ್ರೆಸ್ ಸೋಲಿಸಲು ಎಂದು ರಮೇಶ್ ಬಹಿರಂಗ ಹೇಳಿಕೆ ನೀಡಿದ್ದರು. ಆ ಮೂಲಕ ಪರೋಕ್ಷವಾಗಿ ಲಖನ್ ಜಾರಕಿಹೊಳಿ ಪರ ಮತಯಾಚನೆ ಮಾಡುತ್ತಿದ್ದಾರೆ ಎನ್ನಲಾಗುತ್ತಿದೆ.

ರಮೇಶ್ ಜಾರಕಿಹೊಳಿ ನಡೆ ಬಿಜೆಪಿ ಅಭ್ಯರ್ಥಿಯ ಆತಂಕಕ್ಕೆ ಕಾರಣವಾಗಿದೆ. ಹೀಗಾಗಿ, ಬಿಜೆಪಿ ನಾಯಕರು ರಮೇಶ್ ವಿರುದ್ಧ ಶಿಸ್ತು ಕ್ರಮಕ್ಕೆ ಚಿಂತನೆ ನಡೆಸಿದ್ದಾರೆ ಎನ್ನಲಾಗುತ್ತಿದೆ.ಬಿಜೆಪಿಯಲ್ಲಿರುವ ರಮೇಶ್ ಜಾರಕಿಹೊಳಿ ಸಹ ಬೆಳಗಾವಿಯ ಬಿಜೆಪಿ ಅಭ್ಯರ್ಥಿ ಪರ ನಿಂತಿಲ್ಲ. ಬದಲಾಗಿ ಸೋದರ ಲಖನ್ ಜಾರಕಿಹೊಳಿಗೆ ಬೆಂಬಲವಾಗಿ ನಿಂತಿದ್ದಾರೆ.

ಪಕ್ಷೇತರ ಅಭ್ಯರ್ಥಿಯಾಗಿ ಸೋದರನನ್ನು ಕಣಕ್ಕಿಳಿಸಿ ರಾಜಕೀಯ ದಾಳ ಉರುಳಿಸಿದ್ದಾರೆ. ಬಿಜೆಪಿ ಚುನಾವಣಾ ಪ್ರಚಾರದಿಂದ ರಮೇಶ್ಜಾರಕಿಹೊಳಿ ಅಂತರ ಕಾಯ್ದುಕೊಂಡಿದ್ದಾರೆ. ಇದರಿಂದ ಬಿಜೆಪಿ ಮುಖಂಡರಿಗೆ ಇರುಸು ಮುರುಸು ತಂದೊಡ್ಡಿದೆ.

ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಲಖನ್ ಜಾರಕಿಹೊಳಿ ಟಿಕೆಟ್ ಕೈ ತಪ್ಪಿದ ಕಾರಣಕ್ಕಾಗಿ ಪಕ್ಷೇತರ ಅಭ್ಯರ್ಥಿಯಾಗಿ ಅಖಾಡಕ್ಕೆ ಇಳಿದಿದ್ದಾರೆ. ಲಖನ್ ಅವರಿಗೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹಾಗೂ ಬಾಲಚಂದ್ರ ಜಾರಕಿಹೊಳಿ ಅವರ ಪರೋಕ್ಷ ಬೆಂಬಲವೂ ಇದೆ ಎನ್ನಲಾಗಿದೆ.

ಬೆಳಗಾವಿಯಲ್ಲಿ ಲಖನ್ಗೆ ಟಿಕೆಟ್ ಕೊಡಿಸಲು ರಮೇಶ್ ಜಾರಕಿಹೊಳಿ ಸಾಕಷ್ಟು ಪ್ರಯತ್ನ ನಡೆಸಿದ್ದರು. ಸಿಎಂ ಬಸವರಾಜ ಬೊಮ್ಮಾಯಿ ಅವರ ಬಳಿಯೂ ಮಾತುಕತೆ ನಡೆಸಿದ್ದರು. ಆದರೆ ಬಿಜೆಪಿ ಹಾಲಿ ಸದಸ್ಯ ಮಹಂತೇಶ ಕವಟಗಿಮಠ ಅವರಿಗೆ ಟಿಕೆಟ್ ನೀಡಿದೆ. ಇದರಿಂದ ಅಸಮಾಧಾನಗೊಂಡ ಲಖನ್ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದಾರೆ.

ಲಖನ್ ಸ್ಪರ್ಧೆಯಿಂದ ನಮ್ಮ ಅಭ್ಯರ್ಥಿಗೆ ತೊಂದರೆ ಆಗಲ್ಲ. ರಮೇಶ್, ಬಾಲಚಂದ್ರ ಜಾರಕಿಹೊಳಿ ಜತೆ ಚರ್ಚೆ ಮಾಡ್ತಿದ್ದೇನೆ. ರಮೇಶ್, ಬಾಲಚಂದ್ರ ನಮ್ಮ ಪಕ್ಷದ ಅಭ್ಯರ್ಥಿ ಪರ ಗಟ್ಟಿಯಾಗಿ ನಿಂತಿದ್ದಾರೆ. ಅವರಿಬ್ಬರ ಜತೆ ಇವತ್ತು ಸಹ ಚರ್ಚೆ ಮಾಡ್ತೇನೆ.

ಎ. ಮಂಜು ವಿಚಾರಕ್ಕೂ ಇದಕ್ಕೂ ಸಂಬಂಧ ಇಲ್ಲ. ಬೆಳಗಾವಿ ಪರಿಷತ್ ಚುನಾವಣೆಯ ಬೆಳವಣಿಗೆಗಳ ಮೇಲೆ ಗಮನ ಇರಿಸಿದ್ದೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬಿಜೆಪಿಯಲ್ಲಿರುವ ರಮೇಶ್ ಜಾರಕಿಹೊಳಿ ಸಹ ಬೆಳಗಾವಿಯ ಬಿಜೆಪಿ ಅಭ್ಯರ್ಥಿ ಪರ ನಿಂತಿಲ್ಲ. ಬದಲಾಗಿ ಸೋದರ ಲಖನ್ ಜಾರಕಿಹೊಳಿಗೆ ಬೆಂಬಲವಾಗಿ ನಿಂತಿದ್ದಾರೆ.

Facebook Comments

Sri Raghav

Admin