ಕೇಸರಿಮಯವಾದ ಉತ್ತರ ಕರ್ನಾಟಕ : ಗೆಲುವಿನತ್ತ ಜಿಗಜಿಣಗಿ, ಜೋಶಿ, ಕರಡಿ ಸಂಗಣ್ಣ, ಸುರೇಶ್ ಅಂಗಡಿ..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಳಗಾವಿ, ಮೇ 23- ಉತ್ತರ ಕರ್ನಾಟಕ ಭಾಗದಲ್ಲಿ ಬಿಜೆಪಿಯ ಅಬ್ಬರ ಜೋರಾಗಿದೆ. ಬೆಳಗಾವಿ, ಚಿಕ್ಕೋಡಿ, ವಿಜಯಪುರ, ಬಾಗಲಕೋಟೆ, ಹಾವೇರಿ, ಧಾರವಾಡ, ಕಲಬುರಗಿ, ಬೀದರ್, ಕೊಪ್ಪಳ, ರಾಯಚೂರು ಕ್ಷೇತ್ರಗಳಲ್ಲಿ ಬಿಜೆಪಿಯ ಅಭ್ಯರ್ಥಿಗಳು ಆರಂಭಿಕ ಹಂತದಿಂದಲೂ ಮುನ್ನಡೆ ಭಾರೀ ಮುನ್ನಡೆ ಸಾಧಿಸಿ, ಗೆಲುವಿನತ್ತ ದಾಪುಗಾಲಿಟ್ಟಿದ್ದಾರೆ.

ವಿಜಯಪುರ ಬಿಜೆಪಿ ಅಭ್ಯರ್ಥಿ ರಮೇಶ್ ಜಿಗಜಿಣಗಿ ತಮ್ಮ ಪ್ರತಿಸ್ಪರ್ಧಿ ಜೆಡಿಎಸ್‍ನ ಡಾ.ಸುನೀತಾ ಚೌಹಾಣ್ ವಿರುದ್ಧ 1ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ. [ LOKSABHA ELECTIONS 2019 RESULT – Live Updates]

ಬೆಳಗಾವಿಯಲ್ಲಿ ಬಿಜೆಪಿಯ ಸುರೇಶ್ ಅಂಗಡಿ, ಚಿಕ್ಕೋಡಿಯಲ್ಲಿ ಅಣ್ಣಾ ಸಾಹೇಬ್ ಜೊಲ್ಲೆ, ಬಾಗಲಕೋಟೆಯ ಪಿ.ಸಿ.ಗದ್ದಿಗೌಡರ್, ಹಾವೇರಿಯಲ್ಲಿ ಶಿವಕುಮಾರ್ ಉದಾಸಿ, ಧಾರವಾಡದಲ್ಲಿ ಪ್ರಹ್ಲಾದ ಜೋಶಿ ಜಯದ ಹಾದಿಯತ್ತ ಸಾಗಿದ್ದಾರೆ.

ಬೀದರ್‍ನಲ್ಲಿ ಗೆಲುವಿನ ಭಾರೀ ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್ ಈಶ್ವರ್ ಖಂಡ್ರೆಗೆ ಭಾರೀ ಹಿನ್ನಡೆಯಾಗಿದ್ದು, ಬಿಜೆಪಿಯ ಭಗವಂತ್ ಖೂಬಾ ಮುನ್ನಡೆ ಸಾಧಿಸಿದ್ದಾರೆ. ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಕೊನೆ ಕ್ಷಣದವರೆಗೆ ಹರಸಾಹಸ ಪಟ್ಟು ಬಿಜೆಪಿಯ ಟಿಕೆಟ್ ಗಿಟ್ಟಿಸಿದ್ದ ಸಂಗಣ್ಣ ಕರಡಿಯವರನ್ನು ಮತದಾರರು ಕೈ ಹಿಡಿದಿದ್ದಾರೆ. [ LOKSABHA ELECTIONS 2019 RESULT – Live Updates]

ರಾಯಚೂರಿನಲ್ಲಿ ರಾಜ ಅಮರೇಶ ನಾಯಕ್ 10 ಸುತ್ತಿನ ಮತ ಎಣಿಕೆಯಲ್ಲೂ ಮುನ್ನಡೆ ಕಾಯ್ದುಕೊಂಡು 50 ಸಾವಿರಕ್ಕೂ ಹೆಚ್ಚು ಮತಗಳ ಅಂತರ ಕಾಯ್ದುಕೊಂಡಿದ್ದಾರೆ. ಬಳ್ಳಾರಿಯಲ್ಲಿ ಬಿಜೆಪಿಯ ದೇವೇಂದ್ರಪ್ಪ ಹಾಗೂ ಕಾಂಗ್ರೆಸ್‍ನ ಉಗ್ರಪ್ಪ ನಡುವೆ ಜಿದ್ದಾಜಿದ್ದಿ ನಡೆದಿದೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin