ನಾಳೆ ಬಿಜೆಪಿ ಸಂಸದೀಯ ಮಂಡಳಿ ಸಭೆ

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ, ಮೇ 24- ಲೋಕಸಭೆ ಚುನಾವಣೆಯಲ್ಲಿ ದಾಖಲೆಯ ಜಯ ಸಾಧಿಸಿರುವ ಬಿಜೆಪಿ ಸಂಸದೀಯ ಮಂಡಳಿ ಸಭೆ  ಸಂಜೆ ನಡೆಯಲಿದೆ.  ಪ್ರಧಾನಿ ನರೇಂದ್ರ ಮೋದಿ ಈ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಬಿಜೆಪಿಯ ನಿರ್ಧಾರ ಕೈಗೊಳ್ಳುವ ಅತ್ಯುನ್ನತ ಅಂಗಸಂಸ್ಥೆಯಾದ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಪಕ್ಷದ ಅಧ್ಯಕ್ಷ ಅಮಿತ್ ಷಾ ಹಾಗೂ ಮಂಡಳಿ ಸದಸ್ಯರು ಭಾಗವಹಿಸಲಿದ್ದಾರೆ.

ಈ ಸಭೆಯಲ್ಲಿ ಮತದಾರರನ್ನು ಮತ್ತು ಗೆಲುವಿಗಾಗಿ ಶ್ರಮಿಸಿದ ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸುವ ನಿರ್ಣಯ ಕೈಗೊಳ್ಳಲಾಗುವುದು ಎಂದು ಪಕ್ಷದ ಮೂಲಗಳು ತಿಳಿಸಿವೆ.

ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಲಿದ್ದಾರೆ ಎಂದು ಮಂಡಳಿಯ ಹಿರಿಯ ಮುಖಂಡರೊಬ್ಬರು ತಿಳಿಸಿದ್ದಾರೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ