ಹೃದಯಘಾತದಿಂದ ಬಿಜೆಪಿ ಶಾಸಕ ನಿಧನ

ಈ ಸುದ್ದಿಯನ್ನು ಶೇರ್ ಮಾಡಿ

ಲಕ್ನೋ,ಮೇ.31-ಉತ್ತರಪ್ರದೇಶದ ಬಿಜೆಪಿ ಶಾಸಕ ದೇವೆಂದ್ರ ಪ್ರತಾಪ್ ಸಿಂಗ್ ಅವರು ಹೃದಯಘಾತದಿಂದ ನಿಧನರಾಗಿದ್ದಾರೆ. ಐವತ್ತೈದು ವರ್ಷ ವಯಸ್ಸಿನ ಸಿಂಗ್ ಅವರು ಅಮಪುರ್ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದು, ಅವರಿಗೆ ಇದ್ದಕ್ಕಿದ್ದ ಹಾಗೆ ಎದೆ ನೋವು ಕಾಣಿಸಿಕೊಂಡಿತು.

ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಅವರ ಕುಟುಂಬ ಮೂಲಗಳು ತಿಳಿಸಿವೆ. ಸತತ ಮೂರು ಭಾರಿ ಶಾಸಕರಾಗಿ ಆರಿಸಿಬಂದಿದ್ದ ಸಿಂಗ್ ಅವರ ನಿಧನಕ್ಕೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಾಪ ವ್ಯಕ್ತಪಡಿಸಿದ್ದಾರೆ. ಸಿಂಗ್ ಅವರು ಪತ್ನಿ, ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.

Facebook Comments

Sri Raghav

Admin