ರಾಜ್ಯ ಬಿಜೆಪಿ ಕಚೇರಿಯ ಸಿಬ್ಬಂದಿಗೆ ಕೊರೋನಾ, ಕಾರ್ಯಕಾರಿಣಿ ಸಭೆ ಮುಂದೂಡಿಕೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು : ಬಿಜೆಪಿ ಕಚೇರಿಯ ಇಬ್ಬರು ಸಿಬ್ಬಂದಿಗೆ ಕೊರೋನಾ ಪಾಸಿಟಿವ್ ಕಂಡು ಬಂದ ಹಿನ್ನೆಲೆಯಲ್ಲಿ ಇಂದು ನಡೆಯಬೇಕಿದ್ದ ಕಾರ್ಯಕಾರಿಣಿ ಸಭೆ ಮುಂದೂಡಲಾಗಿದೆ.

ಇದರ ಜೊತೆಗೆ ಶಾಸಕ ಅರವಿಂದ ಲಿಂಬಾವಳಿ ನೇತೃತ್ವದ ಸತ್ಯ ಶೋಧನಾ ಸಮಿತಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಡಿಜೆ ಹಳ್ಳಿ ಪ್ರಕರಣದ ವರದಿಯನ್ನು ನೀಡಬೇಕಾಗಿದ್ದ ಕಾರ್ಯಕ್ರಮವೂ ರದ್ದಾಗಿದೆ.

ಬಿಜೆಪಿ ಕಚೇರಿಯಲ್ಲಿ ಇಂದು ನಡೆಯಬೇಕಿದ್ದ ಎಲ್ಲಾ ಕಾರ್ಯಕ್ರಮಗಳನ್ನು ಮುಂದೂಡಲಾಗಿದೆ. ಮತ್ತು ಕಚೇರಿಯನ್ನು ಸ್ಯಾನಿಟೈಸ್ ಮಾಡಲಾಗಿದೆ.

Facebook Comments

Sri Raghav

Admin