ಸಿದ್ದರಾಮಯ್ಯನವರೇ ನೀವು ಘೋಷಣೆ ಮಾಡಿದ 15 ಲಕ್ಷ ಮನೆ ಗ್ರಹದಲ್ಲಿದೆಯೋ..?

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಅ.23- ನನ್ನ ಅಧಿಕಾರ ಅವಯಲ್ಲಿ 15 ಲಕ್ಷ ಮನೆಗಳನ್ನು ನಿರ್ಮಿಸಿದ್ದೇವೆ ಎಂಬ ವಿದಾನಸಭೆಯ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯನವರ ಹೇಳಿಕೆಗೆ ಬಿಜೆಪಿ ತಿರುಗೇಟು ನೀಡಿದೆ. ಈ ಕುರಿತು ಟ್ವಿಟರ್‍ನಲ್ಲಿ ಸಾಲು ಸಾಲು ಪ್ರಶ್ನೆಗಳನ್ನು ಮಾಡಿರುವ ಬಿಜೆಪಿ, ಇನ್ನೆಷ್ಟು ದಿನ ಸಂತೆ ಭಾಷಣ ಹೊಡೆಯುತ್ತೀರಿ ಸಿದ್ದರಾಮಯ್ಯ ಅವರೇ ಎಂದು ಪ್ರಶ್ನಿಸಿದೆ.

ನೀವು ಘೋಷಣೆ ಮಾಡಿದ 15 ಲಕ್ಷ ಮನೆ ಎಲ್ಲಿದೆ?, ಭೂಮಿಯ ಮೇಲಿದೆಯೋ, ಮಂಗಳ ಗ್ರಹದಲ್ಲಿದೆಯೋ? ಎಂದು ವ್ಯಂಗ್ಯವಾಡಿದೆ.
ಕೇವಲ ಘೋಷಣೆ ಮಾಡಿದ ಮಾತ್ರಕ್ಕೆ ಮನೆ ನಿರ್ಮಾಣವಾಗುತ್ತದೆಯೇ? ಮಂತ್ರಕ್ಕೆ ಮಾವಿನ ಕಾಯಿ ಉದುರುತ್ತದೆಯೇ? ಬುರುಡೆರಾಮಯ್ಯ ಎಂದು ಟೀಕಿಸಿದೆ.

ಅಕಾರಾವಯ ಕೊನೆಯಲ್ಲಿ ಮುಖ್ಯಮಂತ್ರಿ 1 ಲಕ್ಷ ಮನೆ ಯೋಜನೆಯನ್ನು ಬೆಂಗಳೂರು ನಗರದ ಬಡವರಿಗೆ ಸಿದ್ದರಾಮಯ್ಯ ಘೋಷಣೆ ಮಾಡಿದ್ದರು.
ಆದರೆ ಬಜೆಟ್‍ನಲ್ಲಿ ಸೂಕ್ತ ಅನುದಾನ ಕಾಯ್ದಿರಿಸಲಿಲ್ಲ. ಮನೆಕಟ್ಟುವುದಕ್ಕೆ ಆಯ್ದುಕೊಂಡ ಜಾಗವೇ ವಿವಾದಗ್ರಸ್ಥವಾಗಿತ್ತು. ಸುಳ್ಳು ಹೇಳುವುದರಲ್ಲಿ ಸಿದ್ದರಾಮಯ್ಯ ಅವರಿಗೆ ಪಿಎಚ್‍ಡಿ ನೀಡಬಹುದು ಎಂದು ಲೇವಡಿ ಮಾಡಿದೆ.

ಕೃಷ್ಣಾ ಕಣಿವೆ ನೀರಾವರಿ ಯೋಜನೆಗೆ ವಾರ್ಷಿಕ 10 ಸಾವಿರ ಕೋಟಿ ಅನುದಾನ ನೀಡುತ್ತೇನೆಂದು ಕಾಂಗ್ರೆಸ್ ನಡಿಗೆ ಕೃಷ್ಣೆಯ ಕಡೆಗೆ ಪಾದಯಾತ್ರೆ ಸಂದರ್ಭದಲ್ಲಿ ಘೋಷಣೆ ಮಾಡಿದ್ದಿರಿ. ಆದರೆ ಕೊಟ್ಟಿದ್ದು ಬಿಡಿಗಾಸು.
ಅಂಗೈಯಲ್ಲಿ ಆಕಾಶ ತೋರಿಸುವ ವಿಚಾರದಲ್ಲಿ ನೀವು ಪ್ರವೀಣರಲ್ಲವೇ ಎಂದು ಸಿದ್ದರಾಮಯ್ಯನವರಿಗೆ ಟಾಂಗ್ ನೀಡಿದೆ.

Facebook Comments

Sri Raghav

Admin