ಉಗ್ರರ ದಾಳಿ ಖಂಡಿಸಿ ಬಿಎಸ್ವೈ ನೇತೃತ್ವದಲ್ಲಿ ಧರಣಿ ಸತ್ಯಾಗ್ರಹ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಫೆ.17- ಸೈನಿಕರ ಮೇಲೆ ಉಗ್ರರು ನಡೆಸಿದ ದಾಳಿಯನ್ನು ಖಂಡಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ನಗರದಲ್ಲಿಂದು ಧರಣಿ ಸತ್ಯಾಗ್ರಹವನ್ನು ಹಮ್ಮಿಕೊಳ್ಳಲಾಗಿತ್ತು.

ಈ ವೇಳೆ ಮಾತನಾಡಿದ ಮಾಜಿ ಸಚಿವ ಅರವಿಂದ್ ಲಿಂಬಾವಳಿ, ಭಯೋತ್ಪಾದಕರ ವಿರುದ್ಧ ನಾವು ನಿರಂತರ ಸಮರ ಸಾರಿದ್ದೇವೆ. ಆದರೆ ನಮ್ಮ ದೇಶದ ಕೆಲವರು ಭಯೋತ್ಪಾದಕರಿಗೆ ಸಾಥ್ ನೀಡುತ್ತಿದ್ದಾರೆ ಎಂದು ಆರೋಪಿಸಿದರು.

ನಮ್ಮ ಸೈನಿಕರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಬೆಂಬಲಿಸಬೇಕಿದೆ. ಭಯೋತ್ಪಾದಕರು ಒಳಗೆ ನುಸುಳಿ ಹೋರಾಟ ಮಾಡಲು ಸಾಧ್ಯವಾಗದೆ ಈ ರೀತಿಯ ಮಾರ್ಗವನ್ನು ಹಿಡಿದಿದ್ದಾರೆ ಎಂದು ಹೇಳಿದರು.

ಕೆಲವರು ಪಾಕಿಸ್ತಾನದ ಪರವಾಗಿಯೂ ಮಾತನಾಡುತ್ತಾರೆ ಎಂದು ಬೇಸರ ವ್ಯಕ್ತಪಡಿಸಿದ ಲಿಂಬಾವಳಿ, ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಲು ಕೇಂದ್ರ ಸರ್ಕಾರ ಸಿದ್ಧವಿದ್ದು, ವಿರೋಧ ಪಕ್ಷಗಳು ಒಕ್ಕೊರಲಿನಿಂದ ಸಮ್ಮತಿ ಸೂಚಿಸಬೇಕಿದೆ. ದೇಶ ಕಾಯುವ ಸೈನಿಕರ ರಕ್ಷಣೆ ನಮ್ಮೆಲ್ಲರ ಹೊಣೆಯಾಗಬೇಕು ಎಂದು ಹೇಳಿದರು.

ಪಾಕಿಸ್ತಾನದ ಪರ ಸ್ಟೇಟಸ್ ಹಾಕಿದ್ದವರ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳುತ್ತಿರುವುದಕ್ಕೆ ಅಭಿನಂದಿಸಿದರು. ವಿಧಾನಪರಿಷತ್ ಸದಸ್ಯ ರವಿಕುಮಾರ್ ಮಾತನಾಡಿ, ಪಾಕಿಸ್ತಾನ ನಮಗೆ ನಂಬಿಕಸ್ಥ ರಾಷ್ಟ್ರವಲ್ಲ.

ಕಾಶ್ಮೀರ ಭಾರತದ ಅವಿಭಾಜ್ಯ ಅಂಗವಾಗಿದೆ ಎಂದ ಅವರು, ಬಿಜೆಪಿ ಶ್ಯಾಮ್‍ಪ್ರಸಾದ್ ಮುಖರ್ಜಿ ಅವರನ್ನು ಹತ್ಯೆ ಮಾಡಿದ್ದು ಕೂಡ ಪಾಕಿಸ್ತಾನವೇ ಎಂದು ಆರೋಪಿಸಿದರು.  ಕಾಶ್ಮೀರದಲ್ಲಿ ನಮ್ಮ ಪಂಡಿತರನ್ನು ಖಾಲಿ ಮಾಡಿಸಿದೆ. ಅವರು ದೆಹಲಿ, ಮುಂಬೈಗಳಲ್ಲಿದ್ದಾರೆ. ಅವರನ್ನು ಪ್ರಧಾನಿ ನರೇಂದ್ರ ಮೋದಿ ರಕ್ಷಣೆ ಮಾಡಿದ್ದಾರೆ ಎಂದರು.

ಬೆಂಗಳೂರಿನ ಮಹಾತ್ಮ ಗಾಂಧೀಜಿ ಪ್ರತಿಮೆ ಬಳಿ ನಡೆದ ಪ್ರತಿಭಟನೆಯಲ್ಲಿ ಸಂಸದರಾದ ಪಿ.ಸಿ.ಮೋಹನ್, ಶೋಭಾ ಕರಂದ್ಲಾಜೆ, ಮಾಜಿ ಸಚಿವ ಅರವಿಂದ ಲಿಂಬಾವಳಿ, ವಿಧಾನಪರಿಷತ್ ಸದಸ್ಯ ರವಿಕುಮಾರ್ ಮೊದಲಾದವರು ಪ್ರತಿಭಟನೆಗೆ ಸಾಥ್ ನೀಡಿದ್ದರು.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin