ಬಿಜೆಪಿ ಸರ್ಕಾರಕ್ಕೆ 1 ವರ್ಷ : ಸಿಎಂ ನಿವಾಸಕ್ಕೆ ತೆರಳಿ ಶುಭಾಷಯ ಕೋರಿದ ರಾಜ್ಯಾಧ್ಯಕ್ಷ ಕಟೀಲ್

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಜು.27-ಅಧಿಕಾರಕ್ಕೆ ಬಂದು ರಾಜ್ಯ ಸರ್ಕಾರ ಒಂದು ವರ್ಷ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‍ಕುಮಾರ್ ಕಟೀಲ್ ಅವರು ಇಂದು ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಭೇಟಿ ಮಾಡಿ ಶುಭಕೋರಿದರು.

ಬಿಎಸ್‍ವೈ ಅವರ ಸರ್ಕಾರ ನಿವಾಸ ಕಾವೇರಿಗೆ ಆಗಮಿಸಿದ್ದ ನಳೀನ್‍ಕುಮಾರ್ ಕಟೀಲ್, ಪಕ್ಷದ ಉಪಾಧ್ಯಕ್ಷ ನಿರ್ಮಲ್‍ಕುಮಾರ್ ಸುರಾನ ಸೇರಿದಂತೆ ಮತ್ತಿತರರು ಆಗಮಿಸಿ ಹೂಗುಚ್ಛ ನೀಡಿ ಸಿಎಂಗೆ ಅಭಿನಂದನೆ ಸಲ್ಲಿಸಿದರು.

ಮೇಲ್ನೋಟಕ್ಕೆ ಇದೊಂದು ಸೌಹಾರ್ದಯುತ ಭೇಟಿಯಾಗಿದ್ದು, ಸರ್ಕಾರ ಒಂದು ವರ್ಷ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗೆ ರಾಜ್ಯಾಧ್ಯಕ್ಷರು ಅಭಿನಂದನೆ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.

ಉಭಯ ನಾಯಕರು ಸುಮಾರು 20 ನಿಮಿಷಗಳಿಗೂ ಹೆಚ್ಚು ಕಾಲ ಪ್ರಸಕ್ತ ರಾಜಕೀಯ ವಿದ್ಯಮಾನಗಳು, ಪಕ್ಷದ ಸಂಘಟನೆ, ಮುಂದೆ ಕೈಗೊಳ್ಳಬೇಕಾದ ಕಾರ್ಯಕ್ರಮಗಳು ಸೇರಿದಂತೆ ಮತ್ತಿತರ ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.

Facebook Comments

Sri Raghav

Admin