‘ವಿಧಾನ ಪರಿಷತ್ ಅಭ್ಯರ್ಥಿಯಾಗುತ್ತೇನೆಂದು ನಾನು ನಿರೀಕ್ಷೆ ಮಾಡಿರಲಿಲ್ಲ’

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜೂ.18- ವಿಧಾನ ಪರಿಷತ್ ಅಭ್ಯರ್ಥಿಯಾಗುತ್ತೇನೆಂದು ನಾನು ನಿರೀಕ್ಷೆ ಮಾಡಿರಲಿಲ್ಲ. ಸೋನಿಯಾಗಾಂಧಿ, ರಾಹುಲ್‍ಗಾಂಧಿ ನನಗೆ ಅವಕಾಶ ಕೊಟ್ಟಿದ್ದಾರೆ. ಅವರು ಹೇಳಿದಂತೆ ನಾನು ಪಾಲನೆ ಮಾಡುತ್ತೇನೆ ಎಂದು ಕಾಂಗ್ರೆಸ್ ನಾಯಕ ಬಿ.ಕೆ.ಹರಿಪ್ರಸಾದ್ ಹೇಳಿದರು.

ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ರಾಜಕಾರಣ, ರಾಷ್ಟ್ರ ರಾಜಕಾರಣ ಬೇರೆ ಅಲ್ಲ. ಆಕಾಂಕ್ಷಿಗಳೆಲ್ಲರಿಗೂ ಟಿಕೆಟ್ ಪಡೆಯಬೇಕೆಂಬ ಆಸೆ ಇರುತ್ತದೆ. ಕೆಲವು ಕಾರಣಗಳಿಂದ ಹೈಕಮಾಂಡ್‍ನವರು ತೀರ್ಮಾನ ತೆಗೆದುಕೊಳ್ಳುತ್ತಾರೆ.

ಅದರಂತೆ ನಾವು ನಡೆಯಬೇಕಾಗುತ್ತದೆ. ಸೋನಿಯಾಗಾಂಧಿ ಅವರು ನನಗೆ ಈ ಅವಕಾಶ ಕೊಟ್ಟಿದ್ದಾರೆ. ಅದರಂತೆ ನಾನು ನಡೆದುಕೊಳ್ಳುತ್ತೇನೆ ಎಂದು ಹೇಳಿದರು.ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಕಳಿಸಿದ ಪಟ್ಟಿ ಗಮನಿಸಿ ಹೈಕಮಾಂಡ್ ತೀರ್ಮಾನ ಮಾಡಿದೆ ಎಂದು ತಿಳಿಸಿದರು.

ದುರದೃಷ್ಟಕರ: ರಾಷ್ಟ್ರ ರಕ್ಷಣೆ ಮಾಡುವ ಯೋಧರು ಹುತಾತ್ಮರಾಗಿರುವುದು ದುರದೃಷ್ಟಕರ ಬೆಳವಣಿಗೆ.ಯೋಧರ ಸಾವಿಗೆ ಕೇಂದ್ರ ಸರ್ಕಾರವೇ ನೇರ ಹೊಣೆ ಎಂದು ಆರೋಪಿಸಿದ್ದಾರೆ.  ಪ್ರಧಾನಿ ನರೇಂದ್ರ ಮೋದಿ ಅವರು ಕೇವಲ ಭಾಷಣ ಮಾಡಲು ಮಾತ್ರ ಸೀಮಿತವಾಗಿದ್ದಾರೆ. ಕೇಂದ್ರ ಸರ್ಕಾರ ಯೋಧರಿಗೆ ರಕ್ಷಣೆ ನೀಡುವಲ್ಲಿ ವಿಫಲವಾಗಿದೆ ಎಂದು ಅವರು ವಾಗ್ದಾಳಿ ನಡೆಸಿದರು.

Facebook Comments