ಬಿಗ್ ಬ್ರೇಕಿಂಗ್ : ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ಭಾರಿ ಸ್ಫೋಟ..!

ಈ ಸುದ್ದಿಯನ್ನು ಶೇರ್ ಮಾಡಿ

ಹುಬ್ಬಳ್ಳಿ,ಅ.21- ಇಲ್ಲಿನ ರೈಲ್ವೆ ನಿಲ್ದಾಣದಲ್ಲಿ ಪೆಟ್ಟಿಗೆಯನ್ನು ಪರಿಶೀಲನೆ ಸಂದರ್ಭದಲ್ಲಿ ಸ್ಫೋಟಗೊಂಡ ಪರಿಣಾಮ ವ್ಯಕ್ತಿಯೊಬ್ಬರು ತೀವ್ರವಾಗಿ ಗಾಯಯೊಂಡಿದ್ದು, ಕಚೇರಿಯ ಗಾಜುಗಳು ಜಖಂಗೊಂಡಿರುವ ಘಟನೆ ಇಂದು ಮಧ್ಯಾಹ್ನ ನಡೆದಿದ್ದು ಆತಂಕದ ವಾತಾವರಣ ಸೃಷ್ಟಿಯಾಗಿದೆ.

ರೈಲ್ವೆ ನಿಲ್ದಾಣದಲ್ಲಿ ನಿಂತಿದ್ದ ಅಮರಾವತಿ ರೈಲಿನಲ್ಲಿ ಪೆಟ್ಟಿಗೆಯೊಂದು ಪತ್ತೆಯಾಗಿದೆ. ಅದನ್ನು ನೋಡಿದ ಸಾರ್ವಜನಿಕರು ಸ್ಟೇಷನ್ ಮಾಸ್ಟರ್‍ಗೆ ತಿಳಿಸಿದ್ದಾರೆ. ಆ ಪೆಟ್ಟಿಗೆಯನ್ನು ತಂದು ಸ್ಟೇಷನ್ ಮಾಸ್ಟರ್ ಕಚೇರಿಯಲ್ಲಿ ನೋಡಿದಾಗ ನಿಂಬೆಹಣ್ಣುಗಳನ್ನು ತುಂಬಿರುವ ರೀತಿ ಕಂಡುಬಂದಿದೆ. ಆಗ ಪೆಟ್ಟಿಗೆಯನ್ನು ತೆರೆಯುತ್ತಿದ್ದ ಸಂದರ್ಭದಲ್ಲಿ ಸ್ಫೋಟಗೊಂಡಿದೆ.

ಸ್ಫೋಟದ ಪರಿಣಾಮ ವ್ಯಕ್ತಿಯ ಕೈಗಳಿಗೆ ತೀವ್ರ ಗಾಯಗಳಾಗಿವೆ. ಇವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಟೇಷನ್ ಮಾಸ್ಟರ್ ಕಚೇರಿಯ ಕಿಟಕಿ , ಬಾಗಿಲುಗಳ ಗಾಜುಗಳು ಪುಡಿಪುಡಿಯಾಗಿವೆ. ಬಾಕ್ಸ್‍ನಲ್ಲಿದ್ದ ಸ್ಫೋಟಕ ವಸ್ತು ಯಾವುದು ಎಂಬುದು ಸದ್ಯಕ್ಕೆ ತಿಳಿದುಬಂದಿಲ್ಲ.

ಸುದ್ದಿ ತಿಳಿದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಶ್ವಾನದಳ, ಬೆರಳಚ್ಚು ತಜ್ಞರು ಸಹ ಸ್ಥಳಕ್ಕೆ ಆಗಮಿಸಿದ್ದಾರೆ. ಇತ್ತೀಚೆಗಷ್ಟೇ ರಾಜ್ಯದಲ್ಲಿ ಬಾಂಗ್ಲಾ ಉಗ್ರರು ನುಸುಳಿರುವ ಬಗ್ಗೆ ಕೇಂದ್ರ ಗುಪ್ತಚರ ಇಲಾಖೆ ಮಾಹಿತಿ ನೀಡಿ ಕಟ್ಟೆಚ್ಚರ ವಹಿಸುವಂತೆ ಸೂಚನೆ ನೀಡಿತ್ತು.

ರಾಜ್ಯ ಗೃಹಸಚಿವರಾಗಿದ್ದ ಬಸವರಾಜ್ ಬೊಮ್ಮಾಯಿ ಕೂಡ ಇದನ್ನು ಖಚಿತಪಡಿಸಿ ಮುನ್ನೆಚ್ಚರಿಕೆ ವಹಿಸುವಂತೆ ಪೊಲೀಸರಿಗೆ ಸೂಚನೆ ನೀಡಿದ ಬೆನ್ನಲ್ಲೆ ಜನನಿಬಿಡ ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಸ್ಫೋಟ ಸಂಭವಿಸಿರುವುದು ಹುಬ್ಬಳ್ಳಿ ಜನರನ್ನು ಬೆಚ್ಚಿ ಬೀಳಿಸಿದೆ.

Facebook Comments

Sri Raghav

Admin