ಪ್ಲಾಸ್ಮಾ ದಾನಕ್ಕೆ ಬೆಂಗಳೂರಿನಲ್ಲಿ ಭರ್ಜರಿ ರೆಸ್ಪಾನ್ಸ್

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜು.27-ಕೊರೊನಾ ಸೋಂಕಿತರಿಗೆ ವರದಾನವಾಗಲಿರುವ ಪ್ಲಾಸ್ಮಾ ದಾನಕ್ಕೆ ನಗರದಲ್ಲಿ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕಳೆದ ಆರು ದಿನಗಳಲ್ಲಿ 50 ಕ್ಕೂ ಹೆಚ್ಚು ಮಂದಿ ಪ್ಲಾಸ್ಮಾ ದಾನ ಮಾಡಿದ್ದಾರೆ. ಇನ್ನು 150 ಕ್ಕೂ ಹೆಚ್ಚು ಮಂದಿ ಪ್ಲಾಸ್ಮಾ ದಾನಕ್ಕೆ ತಮ್ಮ ಹೆಸರುಗಳನ್ನು ನೋಂದಾಯಿಸಿಕೊಂಡಿದ್ದಾರೆ.

ಜು.21 ರಂದು ನಗರದ ಎಚ್‍ಸಿಜಿ ಆಸ್ಪತ್ರೆಯಲ್ಲಿ ಪ್ಲಾಸ್ಮಾ ಕೇಂದ್ರ ಆರಂಭಿಸಲಾಗಿತ್ತು. ಈ ಆಸ್ಪತ್ರೆಯಲ್ಲಿ ಒಂದು ಸಾವಿರ ಯೂನಿಟ್ ಪ್ಲಾಸ್ಮಾ ಶೇಖರಣೆ ಮಾಡಬಹುದಾಗಿದೆ.

ಕೊರೊನಾ ಸೋಂಕಿನಿಂದ ಗುಣಮುಖರಾದವರು ತಮ್ಮ ಪ್ಲಾಸ್ಮಾ ದಾನ ಮಾಡಬಹುದಾಗಿದೆ. ಕೆಲವರು ಖುದ್ದು ಆಸ್ಪತ್ರೆಗೆ ಭೇಟಿ ನೀಡಿ ಪ್ಲಾಸ್ಮಾ ದಾನ ಮಾಡಲು ಮುಂದೆ ಬಂದಿದ್ದಾರೆ ಎಂದು ವೈದ್ಯ ಡಾ.ವಿಶಾಲ್ ರಾವ್ ತಿಳಿಸಿದ್ದಾರೆ.

ಪ್ಲಾಸ್ಮಾ ದಾನ ಮಾಡಲು ಹೆಸರು ನೋಂದಾಯಿಸಿಕೊಂಡವರಿಗೆ ದಿನಾಂಕ ನಿಗದಿ ಮಾಡುತ್ತೇವೆ. ನಿಗದಿ ಪಡಿಸಿದ ದಿನ ದಾನಿಗಳು ಬಂದು ಪ್ಲಾಸ್ಮಾ ದಾನ ಮಾಡಬೇಕಾಗುತ್ತದೆ.

ಇದುವರೆಗೂ 50 ಕ್ಕೂ ಹೆಚ್ಚು ಮಂದಿ ಪ್ಲಾಸ್ಮಾ ದಾನ ಮಾಡಿದ್ದು, ಇನ್ನು ನೂರಾರು ಮಂದಿ ತಮ್ಮ ಹೆಸರು ನೋಂದಾಯಿಸಿಕೊಂಡಿದ್ದಾರೆ. ಹಂತ ಹಂತವಾಗಿ ಎಲ್ಲಾ ದಾನಿಗಳಿಂದ ಪ್ಲಾಸ್ಮಾ ಸಂಗ್ರಹ ಮಾಡಲಾಗುವುದು.

ದಾನಿಗಳು ನೀಡುವ ಪ್ಲಾಸ್ಮಾ ನೂರಾರು ಕೊರೊನಾ ಸೋಂಕಿತರಿಗೆ ವರದಾನವಾಗಲಿದೆ ಎಂದು ಅವರು ವಿವರಿಸಿದ್ದಾರೆ.

Facebook Comments

Sri Raghav

Admin