2.39 ಲಕ್ಷ ಮೌಲ್ಯದ ಆಭರಣ-ಮೊಬೈಲ್ ವಶ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಜ.24- ದ್ವಿಚಕ್ರ ವಾಹನದಲ್ಲಿ ಸುತ್ತಾಡುತ್ತಾ ಒಂಟಿ ಮಹಿಳೆಯರ ಸುಲಿಗೆ ಮಾಡುತ್ತಿದ್ದ ಆರೋಪಿಯನ್ನು ದಕ್ಷಿಣ ವಿಭಾಗದ ಜಯನಗರ ಠಾಣೆ ಪೊಲೀಸರು ಬಂಧಿಸಿ 2.39 ಲಕ್ಷ ರೂ. ಮೌಲ್ಯದ ಆಭರಣ, ಮೊಬೈಲ್ ಇನ್ನಿತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಕಾರ್ತಿಕ್ ಅಲಿಯಾಸ್ ಜಾಕ್ ಅಲಿಯಾಸ್ ಲೊಡ್ಡೆ ಬಂಧಿತ ಆರೋಪಿಯಾಗಿದ್ದು, ಈತನಿಂದ 1.89 ಲಕ್ಷ ಮೌಲ್ಯದ 58 ಗ್ರಾಂ ಚಿನ್ನದ ಒಡವೆ, 11 ಸಾವಿರ ಮೌಲ್ಯದ ಸ್ಯಾಮ್‍ಸಂಗ್ ಮೊಬೈಲ್, 39 ಸಾವಿರ ರೂ. ಮೌಲ್ಯದ ಬೈಕ್‍ನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಕಳೆದ ಡಿಸೆಂಬರ್ 29ರಂದು ಜಯನಗರ ವ್ಯಾಪ್ತಿಯಲ್ಲಿ ಮಹಿಳೆಯೊಬ್ಬರು ನಡೆದು ಹೋಗುತ್ತಿದ್ದಾಗ ಬೈಕ್‍ನಲ್ಲಿ ಹಿಂಬಾಲಿಸಿಕೊಂಡು ಬಂದಿದ್ದ ದುಷ್ಕರ್ಮಿ ಪರ್ಸ್ ಎಗರಿಸಿ ಪರಾರಿಯಾಗಿದ್ದ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ತನಿಖೆ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಯ ಬಂಧನದಿಂದ ಜಯನಗರ ಠಾಣೆಯ ಒಂದು ಸುಲಿಗೆ ಪ್ರಕರಣ ಮತ್ತು ಮೈಸೂರು ಜಿಲ್ಲೆಯ ಮೇಟಗಳ್ಳಿ ಠಾಣೆಯ ಬೈಕ್ ಕಳ್ಳತನ ಪ್ರಕರಣ ಪತ್ತೆಯಾಗಿದೆ.

Facebook Comments