ದ್ವಿಚಕ್ರ ವಾಹಚ ಕಳ್ಳನ ಬಂಧನ,  ಎಂಟು ಬೈಕ್ ವಶ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಮೇ 27- ಬೈಕ್ ಕಳ್ಳತನ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಹೆಣ್ಣೂರು ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ವ್ಯಕ್ತಿಯೊಬ್ಬನನ್ನು ಬಂಧಿಸಿ ಎಂಟು ಬೈಕ್‍ಗಳನ್ನು ವಶಪಡಿಸಿಕೊಂಡಿದ್ದಾರೆ. ಹೊರಮಾವು ಅಗರದ ನಿವಾಸಿ ಅರ್ಜುನ್(29) ಬಂಧಿತ ಆರೋಪಿಯಾಗಿದ್ದು, ಈತನಿಂದ 8 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.

ಹೆಣ್ಣೂರು ವ್ಯಾಪ್ತಿಯಲ್ಲಿ ಬೈಕ್ ಕಳ್ಳತನ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿತ್ತು. ಹಿರಿಯ ಅಧಿಕಾರಿಗಳ ಮಾರ್ಗದರ್ಶನದಂತೆ ಹೆಣ್ಣೂರು ಪೊಲೀಸರು ತಂಡವನ್ನು ರಚಿಸಿದ್ದು, ಈ ತಂಡ ಕಾರ್ಯಾಚರಣೆ ನಡೆಸುತ್ತಿದ್ದಾಗ ಅನುಮಾನಸ್ಪದವಾಗಿ ಬೈಕ್‍ನಲ್ಲಿ ಹೋಗುತ್ತಿದ್ದ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಬೈಕ್ ಕಳ್ಳತನ ಮಾಡಿರುವುದು ಗೊತ್ತಾಗಿದೆ.

ಠಾಣೆಗೆ ಕರೆದೊಯ್ದು ಆರೋಪಿಯನ್ನು ಹೆಚ್ಚಿನ ವಿಚಾರಣೆಗೊಳಪಡಿಸಿದಾಗ ಆರು ತಿಂಗಳಿನಿಂದ ಬೈಕ್ ಕಳ್ಳತನ ಮಾಡಿದ್ದಾಗಿ ಒಪ್ಪಿಕೊಂಡಿದ್ದಾನೆ. ಈತನ ಬಂಧನದಿಂದ ಹೆಣ್ಣೂರು ವ್ಯಾಪ್ತಿಯ 3 ಪ್ರಕರಣ ಬಾಣಸವಾಡಿ 2, ಕೆ.ಆರ್.ಪುರಂ, ಮಹದೇವಪು ಮತ್ತು ಯಶವಂತಪುರ ವ್ಯಾಪ್ತಿಯಲ್ಲಿ ತಲಾ ಒಂದು ಬೈಕ್ ಕಳ್ಳತನ ಪ್ರಕರಣಗಳು ಬೆಳಕಿಗೆ ಬಂದಿದೆ.

ಆರೋಪಿ ಅರ್ಜುನ್‍ನಿಂದ ರಾಯಲ್ ಎನ್‍ಫೀಲ್ಡ್ , ಸುಜುಕಿ, ಬಜಾಜ್ ಮತ್ತು ಡಿಯೋ ಬೈಕ್ ಒಳಗೊಂಡಂತೆ ಸುಮಾರು 8.50 ಲಕ್ಷ ರೂ. ಮೌಲ್ಯದ ಬೈಕ್‍ಗಳನ್ನು ವಶಪಡಿಸಿಕೊಂಡಿದ್ದಾರೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ