ಕೊಲೆ ಆರೋಪಿಗಳ ಬಂಧನ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಜು.3- ಹಳೇ ದ್ವೇಷದ ಹಿನ್ನೆಲೆಯಲ್ಲಿ ಯುವಕನನ್ನು ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ನಾಲ್ಕು ಮಂದಿ ಆರೋಪಿಗಳನ್ನು ಚಿಕ್ಕಜಾಲ ಠಾಣೆ ಪೊಲೀಸರು ಬಂಧಿಸಿದ್ದಾರೆ.  ಗಜೇಂದ್ರ(29), ಶಶಿಧರ್(28), ರವಿಕುಮಾರ್(29) ಮತ್ತು ನವೀನ್‍ಕುಮಾರ್(20) ಬಂಧಿತ ಆರೋಪಿಗಳು. ಮತ್ತೊಬ್ಬ ಆರೋಪಿ ತಲೆಮರೆಸಿಕೊಂಡಿದ್ದಾನೆ.

ಜೂ.26ರಂದು ಸಂಜೆ 6.30ರ ಸುಮಾರಿನಲ್ಲಿ ಚಿಕ್ಕಜಾಲ ಠಾಣೆ ವ್ಯಾಪ್ತಿಯ ಡೆಕತ್ಲಾನ್ ಸಮೀಪ ಹಳೇ ದ್ವೇಷದ ಹಿನ್ನೆಲೆಯಲ್ಲಿ ಹೊಸೂರು ಗ್ರಾಮದ ಮೀನುಕುಂಟೆ ನಿವಾಸಿ ಸುಬ್ರಮಣಿ(29) ಎಂಬಾತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು.

ಈಶಾನ್ಯ ವಿಭಾಗದ ಉಪಪೊಲೀಸ್ ಆಯುಕ್ತ ಭೀಮಾಶಂಕರ್ ಗುಳೇದ್ ಅವರ ಮಾರ್ಗದರ್ಶನದಲ್ಲಿ ದೇವನಹಳ್ಳಿ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಸುಬ್ರಮಣ್ಯ ಅವರ ಸಲಹೆಯಂತೆ ಇನ್‍ಸ್ಪೆಕ್ಟರ್ ಮುತ್ತುರಾಜ್ ಅವರ ನೇತೃತ್ವದ ತಂಡ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

Facebook Comments