ಗಾಂಜಾ ಮಾರಾಟ : ಒಡಿಶಾ ಮೂಲದ ವ್ಯಕ್ತಿ ಸೆರೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಜು.4- ಸಾರ್ವಜನಿಕ ಸ್ಥಳದಲ್ಲಿ ಮಾದಕವಸ್ತು ಗಾಂಜಾ ಮಾರಾಟ ಮಾಡುತ್ತಿದ್ದ ಒಡಿಸ್ಸಾ ಮೂಲದ ವ್ಯಕ್ತಿಯೊಬ್ಬನನ್ನು ಉತ್ತರ ವಿಭಾಗದ ಯಶವಂತಪುರ ಠಾಣೆ ಪೆÇಲೀಸರು ಬಂಧಿಸಿದ್ದಾರೆ.  ಒಡಿಶಾದ ಅಂಗುಲ್ ಜಿಲ್ಲೆಯ ಬನರಪಲ್ ನಿವಾಸಿ ಗೋಪಿನಾಥ್ ಬರಹ್(32) ಬಂಧಿತ ಆರೋಪಿ. ಈತನಿಂದ ಎಂಟು ಕೆಜಿ ತೂಕದ ಮಾದಕ ವಸ್ತು ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ.

ಯಶವಂತಪುರ ವ್ಯಾಪ್ತಿಯ ಯಶವಂತಪುರ ರೈಲ್ವೆ ನಿಲ್ದಾಣ ಎದುರಿನ ಹೋಟೆಲ್‍ವೊಂದರ ಮುಂಭಾಗ ಜಗುಲಿಕಟ್ಟೆ ಬಳಿ ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದಾನೆ ಎಂಬ ಮಾಹಿತಿ ಪೊಲೀಸರಿಗೆ ಲಭಿಸಿದೆ.

ತಕ್ಷಣ ಕಾರ್ಯಪ್ರವೃತ್ತರಾದ ಪೆÇಲೀಸರು ಸ್ಥಳಕ್ಕೆ ತೆರಳಿ ಆರೋಪಿಯನ್ನು ಬಂಧಿಸಿ ವಿಚಾರಣೆಗೊಳಪಡಿಸಿದಾಗ, ಒಡಿಶಾದಲ್ಲಿ ಪರಿಚಯಸ್ಥನಿಂದ ಕಡಿಮೆ ಬೆಲೆಗೆ ಗಾಂಜಾ ಖರೀದಿಸಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದುದ್ದಾಗಿ ಒಪ್ಪಿಕೊಂಡಿದ್ದಾನೆ.

ಯಶವಂತಪುರ ಉಪವಿಭಾಗದ ಎಸಿಪಿ ಶ್ರೀನಿವಾಸ ರೆಡ್ಡಿ ಮಾರ್ಗದರ್ಶನದಲ್ಲಿ ಇನ್‍ಸ್ಪೆಕ್ಟರ್ ಮೊಹಮ್ಮದ್ ಮುಕಾರಾಂ ಹಾಗೂ ಸಿಬ್ಬಂದಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Facebook Comments