138 ಪೊಲೀಸರು ಗುಣಮುಖ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜು.7- ನಗರದಲ್ಲಿ ಇದುವರೆಗೂ 383 ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಅವರೆಲ್ಲರೂ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.  ಈ ಪೈಕಿ 138 ಸಿಬ್ಬಂದಿ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಆರು ಮಂದಿ ಮೃತಪಟ್ಟಿದ್ದಾರೆ.

ಒಟ್ಟಾರೆ ರಾಜ್ಯದಲ್ಲಿ 577 ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದ್ದು, ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.  ಕೊರೊನಾ ವಾರಿಯರ್ಸ್‍ಗಳಾಗಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಪಡೆಗೆ ಪ್ರತಿನಿತ್ಯ ಸೋಂಕು ಕಾಣಿಸಿಕೊಳ್ಳುತ್ತಿರುವುದು ಆತಂಕವನ್ನುಂಟುಮಾಡಿದೆ.

Facebook Comments