ಇಬ್ಬರು ಮೊಬೈಲ್ ಚೋರರ ಸೆರೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಸೆ.14- ಮೊಬೈಲ್‍ಗಳನ್ನು ಅಪಹರಿಸುತ್ತಿದ್ದ ಇಬ್ಬರನ್ನು ಬ್ಯಾಡರಹಳ್ಳಿ ಠಾಣೆ ಪೊಲೀಸರು ಬಂಧಿಸಿ ಮೂರು ಲಕ್ಷ ರೂ. ಬೆಲೆ ಬಾಳುವ 45 ಮೊಬೈಲ್‍ಗಳನ್ನು ವಶಪಡಿಸಿಕೊಂಡಿದ್ದಾರೆ.  ಮಂಜು ಅಲಿಯಾಸ್ ಬಿಕಾಶ್(19) ಮತ್ತು ರಾಜುರಾವ್(30)  ಬಂಧಿತರು.

ಸೆಪ್ಟೆಂಬರ್ 8ರಂದು ರಾತ್ರಿ 8.20ರ ಸುಮಾರಿನಲ್ಲಿ ಅನ್ನಪೂರ್ಣೇಶ್ವರಿ ನಗರದ 10ನೇ ಕ್ರಾಸ್ ಬಾಲಾಜಿ ನಗರದಲ್ಲಿ ತಮ್ಮ ಮನೆ ಮುಂದೆ ವ್ಯಕ್ತಿಯೊಬ್ಬರು ಮೊಬೈಲ್‍ನಲ್ಲಿ ಮಾತನಾಡುತ್ತಾ ನಿಂತಿದ್ದಾಗ ಅಪರಿಚಿತ ವ್ಯಕ್ತಿಗಳು ಇವರ ಮೊಬೈಲ್ ಎಗರಿಸಿ ಪರಾರಿಯಾಗಿದ್ದರು.  ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದ ಬ್ಯಾಡರಹಳ್ಳಿ ಠಾಣೆ ಪೊಲೀಸರು ತನಿಖೆ ನಡೆಸಿ ಆರೋಪಿಗಳಿಬ್ಬರನ್ನು ಬಂಧಿಸಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊಬೈಲ್ ಫೋನ್ ಸೇರಿ ಬ್ಯಾಡರಹಳ್ಳಿ ಠಾಣೆ ವ್ಯಾಪ್ತಿಗಳಲ್ಲಿ ಹೊಸದಾಗಿ ನಿರ್ಮಾಣ ಮಾಡುತ್ತಿರುವ ಕಟ್ಟಡಗಳ ಬಳಿ ಕಳವು ಮಾಡಿದ್ದ ವಿವಿಧ ಕಂಪನಿಯ ಮೊಬೈಲ್‍ಗಳನ್ನು ವಶಪಡಿಸಿಕೊಳ್ಳುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

Facebook Comments