ಕೊರೊನಾ ಮಹಾಮಾರಿಗೆ ಎಎಸ್‍ಐ ಬಲಿ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಸೆ.16- ಮತ್ತೊಬ್ಬ ಕೊರೊನಾ ವಾರಿಯರ್ ಎಎಸ್‍ಐ ಮಹಾಮಾರಿಗೆ ಬಲಿಯಾಗಿದ್ದಾರೆ. ಮಹಾಲಕ್ಷ್ಮೀ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಎಸ್‍ಐ ಆಗಿದ್ದ ಪರಮೇಶ್ವರಯ್ಯ(57) ಕೊರೊನಾ ಮಹಾಮಾರಿಗೆ ಪ್ರಾಣ ಕಳೆದುಕೊಂಡ ವಾರಿಯರ್.

ಮಾಗಡಿ ರಸ್ತೆಯಲ್ಲಿ ವಾಸವಾಗಿದ್ದ ಪರಮೇಶ್ವರಯ್ಯ ಅವರಿಗೆ ಕೋವಿಡ್-19 ಸೋಂಕು ತಗಲಿದ ಹಿನ್ನೆಲೆಯಲ್ಲಿ ಅವರನ್ನು ಕಳೆದ ಆಗಸ್ಟ್ 26ರಂದು ಮಲ್ಲೇಶ್ವರಂ ನಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಕಳೆದ ಹಲವಾರು ದಿನಗಳಿಂದ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಪರಮೇಶ್ವರಪ್ಪವರಿಗೆ ಚಿಕಿತ್ಸೆ ಫಲಕಾರಿಯಾಗಿದೆ ಇಂದು ಬೆಳಗ್ಗೆ ಸಾವನ್ನಪ್ಪಿದ್ದಾರೆ.

ಪೊಲೀಸ್ ಇಲಾಖೆಯಲ್ಲಿ ಉತ್ತಮ ಸೇವೆ ಸಲ್ಲಿಸಿ ಕೊರೊನಾ ಮಹಾಮಾರಿಗೆ ಬಲಿಯಾಗಿರುವ ಪರಮೇಶ್ವರಪ್ಪ ಅವರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

Facebook Comments