ಮಹಾ ವಂಚಕ ಸಿಸಿಬಿ ವಶಕ್ಕೆ..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಡಿ.16- ತನಗೆ ಬಿಜೆಪಿ ನಾಯಕರು ಹಾಗೂ ಇತರೆ ಗಣ್ಯರ ಪರಿಚಯವಿದೆ ಎಂದು ಸಾರ್ವಜನಿಕರಿಂದ ಹಣ ಪಡೆದು ವಂಚಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಸಿಸಿಬಿ ಪೊಲೀಸರು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.  ಗರಬಾವಿಯಲ್ಲಿರುವ ಆರೋಪಿಯ ಮನೆ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿ ಹಲವು ದಾಖಲೆಗಳನ್ನು ವಶಪಡಿಸಿಕೊಂಡಿ ದ್ದಾರೆ.

ಉದ್ಯಮಿಯೊಬ್ಬರಿಗೆ ಕೆಎಸ್‍ಆರ್‍ಟಿಸಿ ಅಧ್ಯಕ್ಷ ಸ್ಥಾನ ಕೊಡಿಸುವುದಾಗಿ ಆಸೆ ತೋರಿಸಿ ಅವರಿಂದ ಹಣ ಪಡೆದು ವಂಚಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಸಿಸಿಬಿ ಪೊಲೀಸರು ದೂರು ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಈತ ಇನ್ನೂ ಹಲವರಿಗೆ ಹುದ್ದೆಗಳ ಆಮಿಷವೊಡ್ಡಿ ಕೋಟ್ಯಂತರ ರೂ. ಪಡೆದು ವಂಚಿಸಿರುವ ಬಗ್ಗೆ ಅನುಮಾನ ವ್ಯಕ್ತವಾಗಿದ್ದು, ಈ ನಿಟ್ಟಿನಲ್ಲಿಯೂ ಸಿಸಿಬಿ ಪೊಲೀಸರು ಆತನನ್ನು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

Facebook Comments