ವಿಜಯನಗರ ಪೊಲೀಸರ ಕಾರ್ಯಾಚರಣೆ : ಐವರ ಸೆರೆ, 42.56 ಲಕ್ಷ ರೂ. ಮೌಲ್ಯದ ಆಭರಣ ವಶ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜು.11- ವಿಜಯನಗರ ಉಪವಿಭಾಗದ ಪೊಲೀಸರು ಕಾರ್ಯಾಚರಣೆ ನಡೆಸಿ ಮನೆಗಳ್ಳತನ ಹಾಗೂ ಕನ್ನಕಳವು ಮಾಡುತ್ತಿದ್ದ ಐದು ಮಂದಿಯನ್ನು ಬಂಧಿಸಿ 42.56 ಲಕ್ಷ ರೂ. ಬೆಲೆ ಬಾಳುವ 1 ಕೆಜಿ 417 ಗ್ರಾಂ ತೂಕದ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ.

ಇತ್ತೀಚೆಗೆ ಪಶ್ಚಿಮ ವಿಭಾಗದ ಪೊಲೀಸ್ ಠಾಣೆ ವ್ಯಾಪ್ತಿಗಳಲ್ಲಿ ಕಳವು ಪ್ರಕರಣಗಳು ಹೆಚ್ಚಾಗಿ ನಡೆಯುತ್ತಿದುದ್ದರಿಂದ ಆರೋಪಿಗಳ ಪತ್ತೆಗೆ ಸಹಾಯಕ ಪೊಲೀಸ್ ಆಯುಕ್ತ ಧರ್ಮೇಂದ್ರ ನೇತೃತ್ವದಲ್ಲಿ ವಿಜಯನಗರ, ಬಸವೇಶ್ವರನಗರ ಹಾಗೂ ಕಾಮಾಕ್ಷಿಪಾಳ್ಯ ಠಾಣೆಗಳ ಇನ್ಸ್‍ಪೆಕ್ಟರ್ ಮತ್ತು ಸಿಬ್ಬಂದಿ ಅವರನ್ನೊಳಗೊಂಡ ತಂಡವನ್ನು ರಚನೆ ಮಾಡಿದ್ದು, ಈ ತಂಡ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದೆ.

ವಿಜಯನಗರ:
ಡೋರ್‍ಲಾಕ್ ಹಾಕಿರುವ ಮನೆಗಳನ್ನು ಗುರುತಿಸಿ ರಾಡ್‍ನಿಂದ ಮೀಟಿ ಚಿನ್ನಾಭರಣ ಕಳವು ಮಾಡುತ್ತಿದ್ದ ಪ್ರಕಾಶ್ (30) ಎಂಬ ಆರೋಪಿಯನ್ನು ಬಂಧಿಸಿ 20 ಲಕ್ಷ ರೂ. ಬೆಲೆ ಬಾಳುವ 833 ಗ್ರಾಂ ತೂಕದ ಚಿನ್ನಾಭರಣ ಹಾಗೂ ಕೃತ್ಯಕ ಬಳಸಿದ್ದ ಬೈಕನ್ನು ವಶಪಡಿಸಿಕೊಂಡಿದ್ದಾರೆ.

ಕಳ್ಳತನ ಮಾಡಿದ್ದ ಆಭರಣಗಳನ್ನು ಫೈನಾನ್ಸ್ ಕಂಪೆನಿಗಳಲ್ಲಿ ಗಿರವಿ ಇಟ್ಟಿರುವುದಾಗಿ ಆರೋಪಿ ನೀಡಿದ ಹೇಳಿಕೆ ಮೇರೆಗೆ ವಿಜಯನಗರ, ರಾಮಮೂರ್ತಿನಗರ ಮತ್ತು ಕೆ.ಆರ್.ಪುರ ಠಾಣೆ ವ್ಯಾಪ್ತಿಗಳ ಎರಡು ಮನೆಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ.

ಬಸವೇಶ್ವರನಗರ:
ಹಗಲು ಮತ್ತು ರಾತ್ರಿ ವೇಳೆ ಕನ್ನಗಳವು ಮಾಡುತ್ತಿದ್ದ ಮಹೇಶ್ (27) ಮತ್ತು ಧಯಾನಂದ್ (24) ಎಂಬಾತನನ್ನು ಬಂಧಿಸಿ 15 ಲಕ್ಷ ಬೆಲೆ ಬಾಳುವ ಚಿನ್ನದ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ.

ಆರೋಪಿಯ ಬಂಧನದಿಂದ ಬಸವೇಶ್ವರನಗರ, ಬ್ಯಾಡರಹಳ್ಳಿ, ವಿಜಯನಗರ, ಕಾಮಾಕ್ಷಿಪಾಳ್ಯ ಮತ್ತು ಮಾಗಡಿ ರಸ್ತೆ ಪೆÇಲೀಸ್ ಠಾಣೆ ವ್ಯಾಪ್ತಿಯ ನಾಲ್ಕು ಕಳವು, ನಾಲ್ಕು ಮನೆಗಳ್ಳತನ ಹಾಗೂ ಮೂರು ಸಾಮಾನ್ಯ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರಭರಣವನ್ನು ಬಸವೇಶ್ವರನಗರ ಠಾಣೆ ಪೆÇಲೀಸರು ವಶಪಡಿಸಿಕೊಂಡಿದ್ದಾರೆ.

ಕಾಮಾಕ್ಷಿಪಾಳ್ಯ: ದುಶ್ಚಟಗಳಿಗೆ ದುಂದುವೆಚ್ಚ ಮಾಡಲು ಹಾಗೂ ಐಷಾರಾಮಿ ಜೀವನ ನಡೆಸುವ ಸಲುವಾಗಿ ಬೀಗ ಹಾಕಿರುವ ಮನೆಗಳನ್ನು ಗುರುತಿಸಿ ಕಳ್ಳತನ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಂಕದಕಟ್ಟೆಯ ನಾಗೇಶ್ (33) ಮತ್ತು ಹೇಮರಾಜು (34)ನನ್ನು ಬಂಧಿಸಿ 2.50 ಲಕ್ಷ ಬೆಲೆ ಬಾಳುವ 82ಗ್ರಾಂ ತೂಕದ ಚಿನ್ನದ ಆಭರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ