ಚಾಕುವಿನಿಂದ ಇರಿದು ಯುವಕನ ಕೊಲೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಏ.22- ಸ್ನೇಹಿತನೊಂದಿಗೆ ನಡೆದುಹೋಗುತ್ತಿದ್ದ ಯುವಕನನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ಚಾಕುವಿನಿಂದ ಮನಬಂದಂತೆ ಇರಿದು ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಜೆ.ಸಿ.ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಇಲ್ಲಿನ ಆರ್.ಕೆ.ಬ್ಲಾಕ್ ನಿವಾಸಿ ವಿಘ್ನೇಶ್(22) ಕೊಲೆಯಾದ ಯುವಕ. ರಾತ್ರಿ 12.30ರ ಸುಮಾರಿನಲ್ಲಿ ಗುಂಡಪ್ಪ ಬ್ಲಾಕ್‍ನ 1ನೇ ಕ್ರಾಸ್, ಗಂಗಾಭವಾನಿ ದೇವಸ್ಥಾನ ಸಮೀಪ ತನ್ನ ಸ್ನೇಹಿತನೊಂದಿಗೆ ವಿಘ್ನೇಶ್ ಮಾತನಾಡುತ್ತಾ ಹೋಗುತ್ತಿದ್ದನು.

ಈ ಸಂದರ್ಭದಲ್ಲಿ ಮೂರ್ನಾಲ್ಕು ಮಂದಿ ದುಷ್ಕರ್ಮಿಗಳು ಏಕಾಏಕಿ ವಿಘ್ನೇಶ್‍ನನ್ನು ಅಡ್ಡಗಟ್ಟಿ ಚಾಕುವಿನಿಂದ ವಿವಿಧ ಕಡೆ ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ.  ಸುದ್ದಿ ತಿಳಿದ ಜೆ.ಸಿ.ನಗರ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹಳೇ ವೈಷಮ್ಯದಿಂದ ಈ ಯುವಕನನ್ನು ಕೊಲೆ ಮಾಡಿರಬಹುದೆಂಬ ಶಂಕೆ ವ್ಯಕ್ತವಾಗಿದೆ.

ಮದ್ಯಪಾನ ಮಾಡಿ ದಾರಿಯಲ್ಲಿ ನಡೆದು ಹೋಗುವವರನ್ನು ವಿಘ್ನೇಶ್ ಅಡ್ಡಗಟ್ಟಿ ಬೆದರಿಸಿ ಅವರಿಂದ ಪರ್ಸ್ ಹಾಗೂ ಮೊಬೈಲ್ ಎಗರಿಸುವ ಚಾಳಿ ಹೊಂದಿದ್ದನು.
ಈತನ ವಿರುದ್ಧ ದರೋಡೆ, ಕೊಲೆ ಯತ್ನ ಸೇರಿದಂತೆ ಐದಾರು ಪ್ರಕರಣಗಳು ಮಹಾಲಕ್ಷ್ಮೀ ಲೇಔಟ್ ಠಾಣೆಯಲ್ಲಿ ದಾಖಲಾಗಿದೆ. ಜೆ.ಸಿ.ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಕೊಲೆ ಆರೋಪಿಗಳಿಗಾಗಿ ಶೋಧ ಕೈಗೊಂಡಿದ್ದಾರೆ.

ಸುಳಿವಿದೆ:
ಕೊಲೆ ಆರೋಪಿಗಳ ಸುಳಿವಿದ್ದು, ಆದಷ್ಟು ಬೇಗ ಬಂಧಿಸಲಾಗುವುದು ಎಂದು ಉತ್ತರ ವಿಭಾಗದ ಡಿಸಿಪಿ ಎನ್.ಶಶಿಕುಮಾರ್ ಈ ಸಂಜೆಗೆ ತಿಳಿಸಿದ್ದಾರೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ