ಚಿಪ್ಪುಹಂದಿ ಚಿಪ್ಪುಗಳ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರ ಸೆರೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಆ.14- ಗೋಣಿಚೀಲದಲ್ಲಿ ಪಂಗೋಲಿನ್ (ಚಿಪ್ಪಂದಿ) ಎಂಬ ಪ್ರಾಣಿ ಹಾಗೂ ಚಿಪ್ಪಂದಿಯ ಚಿಪ್ಪುಗಳನ್ನು ತಂದು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರನ್ನು ಉತ್ತರ ವಿಭಾಗದ ಮಹಾಲಕ್ಷ್ಮಿ ಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬನ್ನೇರುಘಟ್ಟ ರಸ್ತೆಯ ಮುನಿ ವೆಂಕಟಪ್ಪ (45) ಮತ್ತು ಗೌತಮ್ (31) ಬಂಧಿತ ಆರೋಪಿಗಳಾಗಿದ್ದು, ಇವರಿಂದ ಚಿಪ್ಪಂದಿ ಮತ್ತು ಚಿಪ್ಪಂದಿಯ ಚಿಪ್ಪುಗಳನ್ನು ವಶಪಡಿಸಿಕೊಂಡಿದ್ದಾರೆ.

ನಿನ್ನೆ ಮಧ್ಯಾಹ್ನ ಮಹಾಲಕ್ಷ್ಮಿ ಲೇಔಟ್ ಪೊಲಿಇಸ್ ಠಾಣೆ ವ್ಯಾಪ್ತಿಯ ಕಮಲಮ್ಮನ ಗುಂಡಿ ಆಟದ ಮೈದಾನ ಬಳಿ ಇವರಿಬ್ಬರು ಗೋಣಿ ಚೀಲದಲ್ಲಿ ಯಾವುದೋ ವಸ್ತುವನ್ನು ತಂದು ಮಾರಾಟ ಮಾಡಲು ಯತ್ನಿಸುತ್ತಿದ್ದಾರೆಂಬ ಮಾಹಿತಿ ಪೊಲೀಸರಿಗೆ ಲಭಿಸಿದೆ.

ಈ ಆಧಾರದ ಮೇಲೆ ಉತ್ತರ ವಿಭಾಗದ ಉಪ ಪೊಲೀಸ್ ಆಯುಕ್ತ ಶಶಿಕುಮಾರ್ ಮಾರ್ಗದರ್ಶನದಲ್ಲಿ ಮಲ್ಲೇಶ್ವರಂ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಧನಂಜಯ ಅವರ ನೇತೃತ್ವದಲ್ಲಿ ಇನ್ಸ್‍ಪೆಕ್ಟರ್ ಪ್ರಶಾಂತ್, ಸಬ್‍ಇನ್ಸ್‍ಪೆಕ್ಟರ್ ವೆಂಕಟರಮಣಪ್ಪ ಹಾಗೂ ಸಿಬ್ಬಂದಿ ದಾಳಿ ಮಾಡಿ ಆರೋಪಿಗಳಿಬ್ಬರನ್ನು ಬಂಧಿಸಿ ಮಾಲನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

Facebook Comments