ಬೆಂಗಳೂರಲ್ಲಿ ಮಾರಕಾಸ್ತ್ರಗಳಿಂದ ತಲೆಗೆ ಹೊಡೆದು ಯುವಕನ ಕೊಲೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಅ.9- ಯುವಕನೊಬ್ಬನ ತಲೆಗೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಿರುವ ಘಟನೆ ಮಾಗಡಿರಸ್ತೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರಾತ್ರಿ ನಡೆದಿದೆ.
ಮಹಾಲಕ್ಷ್ಮಿ ಲೇಔಟ್‍ನ ಜೆಸಿನಗರ ನಿವಾಸಿ ಪ್ರಣವ್(27) ಕೊಲೆಯಾದ ಯುವಕ. ಇವರ ತಂದೆ ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದು, ಅವರ ಜೊತೆ ಸೇರಿಕೊಂಡು ಪ್ರಣವ್ ರಿಯಲ್ ಎಸ್ಟೇಟ್ ವ್ಯವಹಾರ ಮಾಡುತ್ತಿದ್ದರು.

ನಿನ್ನೆ ರಾತ್ರಿ 7.30ರಿಂದ 8.30ರ ಸುಮಾರಿನಲ್ಲಿ ದುಷ್ಕರ್ಮಿಗಳು ಪ್ರಣವ್‍ನನ್ನು ರಾಜಾಜಿನಗರ ಕೈಗಾರಿಕಾ ಪ್ರದೇಶದಲ್ಲಿರುವ ಪಾರ್ಕ್‍ಗೆ ಕರೆತಂದು ಅವರ ತಲೆಗೆ ಮಾರಕಾಸ್ತ್ರಗಳಿಂದ ಹೊಡೆದು ಪರಾರಿಯಾಗಿದ್ದಾರೆ.  ತೀವ್ರವಾಗಿ ಗಾಯಗೊಂಡು ರಕ್ತದ ಮಡುವಿನಲ್ಲಿ ಬಿದ್ದಿದ್ದ ಅವರನ್ನು ಸಾರ್ವಜನಿಕರು ನೋಡಿ ವಿಷಯವನ್ನು ಪೊಲೀಸರಿಗೆ ತಿಳಿಸಿದರು.

ಸುದ್ದಿ ತಿಳಿದ ಮಾಗಡಿರಸ್ತೆ ಠಾಣೆ ಪೆÇಲೀಸರು ಸ್ಥಳಕ್ಕೆ ಆಗಮಿಸಿ ಅವರನ್ನು ವಿಕ್ಟೋರಿಯ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಬೆಳಗ್ಗೆ ಅವರು ಮೃತಪಟ್ಟಿದ್ದಾರೆ.
ಈ ಕೊಲೆಯನ್ನು ಯಾರು, ಯಾವ ಕಾರಣಕ್ಕಾಗಿ ಮಾಡಿದ್ದಾರೆ ಎಂಬುದು ಸದ್ಯಕ್ಕೆ ತಿಳಿದುಬಂದಿಲ್ಲ ಎಂದು ಮಾಗಡಿರಸ್ತೆ ಠಾಣೆ ಪೊಲೀಸರು ಈ ಸಂಜೆಗೆ ತಿಳಿಸಿದ್ದಾರೆ.

ಈ ಬಗ್ಗೆ ಕೊಲೆ ಮೊಕದ್ದಮೆ ದಾಖಲಿಸಿಕೊಂಡಿರುವ  ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Facebook Comments