ಮೆಟ್ರೋ ನಿಲ್ದಾಣದಲ್ಲಿ ಅನುಮಾನಾಸ್ಪದವಾಗಿ ಓಡಾಡಿದ ವ್ಯಕ್ತಿಗಾಗಿ ಪೊಲೀಸರ ತಲಾಶ್

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಮೇ 8-ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ಕಂಡು ಬಂದ ಅನುಮಾನಾಸ್ಪದ ವ್ಯಕ್ತಿ ಬಗ್ಗೆ ವ್ಯಾಪಕ ಶೋಧ ನಡೆಸಲಾಗುತ್ತಿದೆ ಎಂದು ನಗರ ಪೊಲೀಸ್ ಆಯುಕ್ತರಾದ ಸುನೀಲ್‍ಕುಮಾರ್ ತಿಳಿಸಿದರು.

ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲಿ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಅಲ್ಲದೆ ಕರ್ನಾಟಕ ಸ್ಟೇಟ್ ಇಂಡಸ್ಟ್ರಿಯಲ್ ಸೆಕ್ಯೂರಿಟಿ ಫೋರ್ಸ್, ಪ್ರೈವೇಟ್ ಸೆಕ್ಯೂರಿಟಿಗಳನ್ನು ನಿಯೋಜಿಸಲಾಗಿದ್ದು, ಅಗತ್ಯತೆಗೆ ಅನುಗುಣವಾಗಿ ನಮ್ಮ ಪೊಲೀಸರನ್ನು ಸಹ ಜೊತೆಯಲ್ಲಿದ್ದು, ಗಸ್ತಿನಲ್ಲಿದ್ದಾರೆ ಎಂದು ಹೇಳಿದರು.

ಜುಬ್ಬಾ , ಪೈಜಾಮಾ ಧರಿಸಿರುವ ಗಡ್ಡಧಾರಿ ವ್ಯಕ್ತಿ ಬಗ್ಗೆ ಅನುಮಾನ ಬಂದಲ್ಲಿ ತಕ್ಷಣ ಪೊಲೀಸರಿಗೆ ತಿಳಿಸಬೇಕೆಂದು ಸಾರ್ವಜನಿಕರಲ್ಲಿ ಮನವಿ ಮಾಡಿರುವ ಅವರು, ಮೆಟ್ರೋ ನಿಲ್ದಾಣದ ದ್ವಾರದಲ್ಲಿ ಬಂದು-ಹೋದ ವ್ಯಕ್ತಿ ಪತ್ತೆಗಾಗಿ ಎಸಿಪಿ ಮಹಂತರೆಡ್ಡಿ ನೇತೃತ್ವದಲ್ಲಿ ತಂಡ ರಚಿಸಲಾಗಿದ್ದು, ಸಿಸಿ ಟಿವಿ ದೃಶ್ಯಾವಳಿಯನ್ನು ಆಧರಿಸಿ ತನಿಖೆ ಚುರುಕುಗೊಳಿಸಲಾಗಿದೆ ಎಂದರು.

ಡಿಸಿಪಿ ರವಿ ಚನ್ನಣ್ಣನವರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಎಲ್ಲಾ ಬಸ್ ನಿಲ್ದಾಣಗಳಲ್ಲಿ , ರೈಲ್ವೆ ನಿಲ್ದಾಣಗಳಲ್ಲಿ ಅನುಮಾನಾಸ್ಪದ ವ್ಯಕ್ತಿಯ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ ಎಂದು ಹೇಳಿದರು.

Facebook Comments