ಗಾಂಜಾ ಮಾರಾಟ ಮಾಡುತ್ತಿದ್ದ 24 ಮಂದಿ ಬಂಧನ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಅ.22- ಉತ್ತರ ವಿಭಾಗದ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ ಗಾಂಜಾ ಮಾರಾಟ ಮಾಡುತ್ತಿದ್ದ 24 ಮಂದಿಯನ್ನು ಬಂಧಿಸಿ 8.372 ಕೆಜಿ ತೂಕದ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.  ಈ ಹಿಂದೆ ಗಾಂಜಾ ಮಾರಾಟ ಪ್ರಕರಣದಲ್ಲಿ ಭಾಗಿಯಾಗಿದ್ದ 37 ಮಂದಿ ರೂಢಿಗತ ಆರೋಪಿಗಳನ್ನು ಬಂಧಿಸಿ ಅವರ ಮೇಲೆ
ಭದ್ರತಾ ಕಾಯ್ದೆಯಡಿ 28 ಪ್ರಕರಣಗಳನ್ನು ದಾಖಲಿಸಿ ಕ್ರಮ ಕೈಗೊಳ್ಳಲಾಗಿದೆ.

ಈ ಪ್ರಕರಣದ ಜೊತೆ ಶಾಲಾ ಕಾಲೇಜು ಬಳಿ ಇರುವ ಅಂಗಡಿಗಳ ಮೇಲೆ ದಾಳಿ ಮಾಡಿ ಕೋಟ್ಪಾ ಕಾಯ್ದೆಯಡಿ 221 ಪ್ರಕರಣಗಳನ್ನು ದಾಖಲಿಸಿ ಕ್ರಮ ಕೈಗೊಳ್ಳಲಾಗಿದೆ.
ಈ ವಿಶೇಷ ಕಾರ್ಯಾಚರಣೆಯನ್ನು ಮಲ್ಲೇಶ್ವರಂ, ಯಶವಂತಪುರ, ಜೆಸಿನಗರ ಉಪವಿಭಾಗದ ಎಸಿಪಿ ಅವರು ತಮ್ಮ ತಮ್ಮ ಇನ್‍ಸ್ಪೆಕ್ಟರ್ ಹಾಗೂ ಸಿಬ್ಬಂದಿಗಳೊಂದಿಗೆ ವಿಶೇಷ ಕಾರ್ಯಾಚರಣೆ ನಡೆಸಿ 12 ಗಾಂಜಾ ಪ್ರಕರಣಗಳನ್ನು ದಾಖಲಿಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Facebook Comments