ಮಾದಕವಸ್ತು ಕಳ್ಳಸಾಗಣೆ ವಿರುದ್ಧ ಕಾರ್ಯಾಚರಣೆ 7 ಮಂದಿ ಸೆರೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು :  ಮಾದಕ ವಸ್ತುಗಳ ಕಳ್ಳಸಾಗಾಣಿಕೆ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ಕೇಂದ್ರ ವಿಭಾಗದ ಪೊಲೀಸರು ಕಾರ್ಯಾಚರಣೆ ನಡೆಸಿ ವಿದೇಶ ಪ್ರಜೆ ಸೇರಿದಂತೆ ಒಟ್ಟು 7 ಮಂದಿಯನ್ನು ಬಂಧಿಸಿದ್ದಾರೆ.

ಕೇಂದ್ರ ವಿಭಾಗದ ಎಲ್ಲ ಪೊಲೀಸ್ ಠಾಣೆ ವ್ಯಾಪ್ತಿಗಳಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿದ್ದು, ಹಳೆಯ ಆರೋಪಿಗಳ ಇತ್ತೀಚಿನ ಚಟುವಟಿಕೆಗಳ ಬಗ್ಗೆ ಮಾಹಿತಿ ಸಂಗ್ರಹಿಸಿ ಅವರ ಪೈಕಿ 31 ಜನರನ್ನು ಕರೆತಂದು ತೀವ್ರ ವಿಚಾರಣೆಗೊಳಪಡಿಸಿ ಯಾವುದೇ ಕೃತ್ಯಗಳಲ್ಲಿ ಭಾಗಿಯಾಗದಂತೆ ಕಾನೂನಿನಡಿ ಮುಚ್ಚಳಿಕೆಯನ್ನು ಪಡೆಯಲಾಗಿದೆ.

ಮಾದಕ ವಸ್ತುಗಳ ಕಳ್ಳಸಾಗಾಣೆ ಕಾರ್ಯಾಚರಣೆ ಮುಂದುವರೆಸಿ ವಿದೇಶಿ ಪ್ರಜೆ ಡೆರಿಕ್ ಕಾಟಂ, ವೆಂಕಟರಾಮನ್, ಹೇಮಂತ, ವೆಂಕಟೇಗೌಡ, ಸುಬ್ರಮಣ್ಯ, ಸುಭೋದ್, ಶ್ರೀಧರ್ ಹತ್ತಿ ಎಂಬುವರನ್ನು ಬಂಧಿಸಿ ಅವರಿಂದ 8 ಕೆಜಿ ತೂಕದ ಗಾಂಜಾವನ್ನು ವಶಪಡಿಸಿಕೊಂಡು ಮೂರು ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ.

Facebook Comments