ಕ್ವಾರಂಟೈನ್ ನಲ್ಲಿರುವವರಿಗೆ ಬಿಎಂಟಿಸಿ ಬಸ್ ಪ್ರಯಾಣ ನಿಷೇಧ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜು.3-ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಗೃಹ ದಿಗ್ಬಂಧನದಲ್ಲಿರುವ ಮತ್ತು ಸಾಂಸ್ಥಿಕ‌ ಕ್ವಾರಂಟೈನ್ ನಲ್ಲಿರುವವರು ಬಸ್ ಗಳಲ್ಲಿ ಪ್ರಯಾಣಿಸುವುದನ್ನು ನಿಷೇಧಿಸಿದೆ.

ಕೋವಿಡ್-19ರ ಸಾಂಕ್ರಾಮಿಕ ಸೋಂಕು ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ ಗೃಹ ಮತ್ತು ಸಾಂಸ್ಥಿಕ‌ ಕ್ವಾರಂಟೈನ್ ನಲ್ಲಿರುವ ಸಾರ್ವಜನಿಕರು ಬಿಎಂಟಿಸಿಯ ವಾಹನಗಳಲ್ಲಿ ಪ್ರಯಾಣಿಸುವುದು ಹಾಗೂ ಬಸ್ ನಿಲ್ದಾಣಗಳಲ್ಲಿ ಓಡಾಡುವುದನ್ನು ನಿಷೇಧಿಸಿದೆ.

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಎಲ್ಲ ಪ್ರಯಾಣಿಕರನ್ನು ಕ್ವಾರಂಟೈನ್ ಗೆ ಒಳಪಡಿಸಲಾಗಿರುವುದರಿಂದ ಪ್ರಯಾಣಿಕರಿಗೆ ಸಂಸ್ಥೆಯ ವತಿಯಿಂದ ಪ್ರತ್ಯೇಕ ಸಾರಿಗೆ ಸೌಲಭ್ಯವನ್ನು ಒದಗಿಸಲಾಗಿದೆ.

ಸಾಂಸ್ಥಿಕ‌ ಕ್ವಾರಂಟೈನ್ ಗೆ ಒಳಗಾಗುವ ಪ್ರಯಾಣಿಕರು ವಿಮಾನ ನಿಲ್ದಾಣದಿಂದ ನಗರದ ವಿವಿಧ ಭಾಗಗಳಿಗೆ (ಅವರ ವಾಸಸ್ಥಳ ವರೆಗೆ) ವಾಯುವಜ್ರ ಸಾರಿಗೆಗಳಲ್ಲಿ ಪ್ರಯಾಣಿಸಲು ಅನುಮತಿಸಿದೆ ಎಂದು ಬಿಎಂಟಿಸಿ ಹೊರಡಿಸಿರುವ ಆದೇಶದಲ್ಲಿ ತಿಳಿಸಲಾಗಿದೆ.

Facebook Comments

Sri Raghav

Admin