ಬೆಂಗಳೂರಿಗರಿಗೆ ಸದ್ಯದಲ್ಲೇ ಕಾದಿದೆ ‘ಬಿಎಂಟಿಸಿ’ ಶಾಕ್..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಫೆ.25- ಬಿಎಂಟಿಸಿ ಬಸ್ ಪ್ರಯಾಣ ದರ ಹೆಚ್ಚಿಸುವ ಕುರಿತಂತೆ ಸಾರಿಗೆ ಇಲಾಖೆ ತಯಾರಿ ನಡೆಸಿದೆ. ಈ ಕುರಿತು ಸಾರಿಗೆ ಸಚಿವ ಲಕ್ಷ್ಮಣ ಸವದಿ ಸುಳಿವು ನೀಡಿದ್ದಾರೆ. ವಿಧಾನಸೌಧದಲ್ಲಿಂದು ಮಾತನಾಡಿದ ಅವರು, ಪ್ರಯಾಣ ದರ ಹೆಚ್ಚಳ ಸಂಬಂಧ ಪ್ರಸ್ತಾವನೆ ಇದ್ದು, ಈ ಬಗ್ಗೆ ಇನ್ನೂ ಯಾವುದೇ ನಿರ್ಧಾರ ಮಾಡಿಲ್ಲ.

ಸಿಎಂ ಜತೆ ಚರ್ಚೆ ಮಾಡಿ ಟಿಕೆಟ್ ದರ ಪರಿಷ್ಕರಣೆ ಮಾಡುತ್ತೇವೆ. ಮುಖ್ಯಮಂತ್ರಿಗಳು ಒಪ್ಪಿದರೆ ಮಾತ್ರ ಬಿಎಂಟಿಸಿ ಟಿಕೆಟ್ ದರ ಹೆಚ್ಚಳ ಮಾಡುತ್ತೇವೆ. ಅವರು ಸಮ್ಮತಿಸದಿದ್ದರೆ ಟಿಕೆಟ್ ದರ ಹೆಚ್ಚಳ ಮಾಡುವುದಿಲ್ಲ ಎಂದು ಹೇಳಿದ್ದಾರೆ. ಸದ್ಯ ಕೆಎಸ್‍ಆರ್‍ಟಿಸಿ ಟಿಕೆಟ್ ದರ ಹೆಚ್ಚಳ ಇಲ್ಲ. ಬಿಎಂಟಿಸಿ ಟಿಕೆಟ್ ದರ ಹೆಚ್ಚಳದ ಬಗ್ಗೆ ಮಾತ್ರ ಪ್ರಸ್ತಾವನೆ ಇದೆ ಎಂದು ಅವರು ಹೇಳಿದ್ದಾರೆ.

ಬಿಎಂಟಿಸಿಯಲ್ಲಿ ಬಹಳ ಆದಾಯದ ಕೊರತೆ ಇದೆ. 80 ಕೋಟಿ ರೂ. ಸರ್ಕಾರದಿಂದ ಪಡೆದು ಬಿಎಂಟಿಸಿ ನೌಕರರಿಗೆ ಸಂಬಳ ಕೊಟ್ಟಿದ್ದೇವೆ. ಇಂಧನ ಮತ್ತು ಬಿಡಿಭಾಗಗಳಿಗೆ 780 ಕೋಟಿ ಬೇಕಾಗುತ್ತದೆ. 556 ಕೋಟಿ ಬ್ಯಾಂಕ್‍ನಿಂದ ಸಾಲ ಪಡೆದುಕೊಂಡು ಬಾಕಿ ಕಡಿಮೆ ಮಾಡಿದ್ದೇವೆ ಎಂದು ಹೇಳಿದರು.

Facebook Comments