ಚಿತ್ರೀಕರಣದಲ್ಲಿ ಬಳಸುತ್ತಿದ್ದ ಬಣ್ಣದ ಕಾರಿನಲ್ಲಿ ಮೃತದೇಹ ಪತ್ತೆ
ಈ ಸುದ್ದಿಯನ್ನು ಶೇರ್ ಮಾಡಿ
ಬೆಂಗಳೂರು.ಮೇ.13- ಚಲನಚಿತ್ರಗಳ ಚಿತ್ರೀಕರಣದಲ್ಲಿ ಬಳಸುತ್ತಿದ್ದ ಬಣ್ಣ ಬಣ್ಣದ ಕಾರಿನಲ್ಲಿ ಮೃತದೇಹ ಪತ್ತೆಯಾಗಿದ್ದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.
ರಾಜಾಜಿನಗರ ಕೈಗಾರಿಕಾ ಪ್ರದೇಶದಲ್ಲಿ ಕಳೆದ 2 ವರ್ಷಗಳಿಂದ ನಿಂತಿದ್ದ ಕಾರಿನ ಬಳಿ ದುರ್ವಾಸನೆ ಗ್ರಹಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಭೇಟಿ ನೀಡಿ ಪೊಲೀಸರು ಪರಿಶೀಲಿಸಿದಾಗ ಕಾರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆಯಾಗಿದ್ದು, ಮೃತ ವ್ಯಕ್ತಿಯ ಗುರುತು ಇನ್ನು ಪತ್ತೆಯಾಗಿಲ್ಲ.
ಈ ಹಿಂದೆ ಕಾರನ್ನು ಕೆಲ ಚಲನಚಿತ್ರಗಳ ಚಿತ್ರೀಕರಣದಲ್ಲಿ ಬಳಸುತ್ತಿದ್ದರು, ಕಾರು ಮಾಲೀಕರು ಮನೆ ಬದಲಾಯಿಸಿದ್ದಾರೆ. ಆಗಿನಿಂದ ಮನೆ ಬಳಿಯೇ ಕಾರು ನಿಂತಿತ್ತು ಎಂದು ತಿಳಿದು ಬಂದಿದೆ.
Facebook Comments