ಕಾಳಸಂತೆಯಲ್ಲಿ ರೆಮ್‍ಡಿಸಿವಿರ್ ಮಾರಾಟವಾಗದಂತೆ ಕ್ರಮ : ಬೊಮ್ಮಾಯಿ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಏ.16- ಕೋವಿಡ್ ಸೋಂಕು ತೀವ್ರವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ರೈಲ್ವೆ ನಿಲ್ದಾಣ, ಬಸ್ ನಿಲ್ದಾಣ ಹಾಗೂ ವಿಮಾನ ನಿಲ್ದಾಣಗಳಲ್ಲಿ ಥರ್ಮಲ್ ಪರೀಕ್ಷೆ ಹಾಗೂ ಸ್ವಾಬ್ ಸಂಗ್ರಹ ಮಾಡುವುದನ್ನು ಕಡ್ಡಾಯಗೊಳಿಸುವ ಬಗ್ಗೆ ಆರೋಗ್ಯ ಇಲಾಖೆ ಜೊತೆ ಸಮಾಲೋಚನೆ ನಡೆಸಲಾಗುವುದು ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದರು.

ಕೋವಿಡ್ ನಿಯಂತ್ರಣ ಮತ್ತು ರೆಮ್‍ಡಿಸಿವಿರ್ ಚುಚ್ಚುಮದ್ದು ಕಾಳಸಂತೆಯಲ್ಲಿ ಮಾರಾಟವಾಗದಂತೆ ತಡೆಯುವ ಕುರಿತು ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಗಡಿ ಭಾಗದಲ್ಲೂ ಬಿಗಿ ಕ್ರಮ ಕೈಗೊಂಡು ಹೊರಗಿನಿಂದ ಬರುವವರಿಗೆ ಆರ್‍ಟಿಪಿಸಿಆರ್ ಪರೀಕ್ಷೆ ಪ್ರಮಾಣ ಪತ್ರ ಕಡ್ಡಾಯಗೊಳಿಸಬೇಕು ಹಾಗೂ ಸ್ಥಳದಲ್ಲೇ ಸ್ವಾಬ್ ಪರೀಕ್ಷೆ ಮಾಡುವ ಬಗ್ಗೆ ಆರೋಗ್ಯ ಸಚಿವರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಕೋವಿಡ್ ಮಾರ್ಗಸೂಚಿ ಅನುಷ್ಠಾನಕ್ಕೆ ಗೃಹ ಇಲಾಖೆ ಎಲ್ಲ ರೀತಿಯ ಸಹಕಾರವನ್ನು ನೀಡುತ್ತಿದ್ದು, 65, 634 ಮಂದಿ ಮಾಸ್ಕ್ ಧರಿಸದವರಿಗೆ ದಂಡ ವಿಧಿಸಲಾಗಿದೆ. ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಕೈಗೊಂಡ ಕ್ರಮಗಳಿಗೆ ಇಲಾಖೆ ಸಹಕಾರ ನೀಡುವ ಬಗ್ಗೆ ಚರ್ಚೆ ಮಾಡಲಾಗಿದೆ. ರಾತ್ರಿ ಕಫ್ರ್ಯೂ ಜನರ ಸಹಕಾರದಿಂದ ಯಶಸ್ವಿಯಾಗುತ್ತಿದೆ ಎಂದು ಹೇಳಿದರು.

Facebook Comments