ಬೆಂಗಳೂರು ಬೆಂಕಿ ದುರಂತದ ಸಮಗ್ರ ತನಿಖೆಗೆ ಸಚಿವ ಬೊಮ್ಮಾಯಿ ಆದೇಶ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ನ.11- ಹೊಸಗುಡ್ಡದಹಳ್ಳ ಗೋದಾಮಿನಲ್ಲಿ ಉಂಟಾದ ಬೆಂಕಿ ಅವಘಡಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖೆಗೆ ಆದೇಶಿಸಲಾಗಿದೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳುತ್ತೇವೆ.

ಇದನ್ನು ಗಂಭೀರವಾಗಿ ಪರಿಗಣಿಸಿದ್ದು, ಸಮಗ್ರ ತನಿಖೆಗೆ ಆದೇಶ ಮಾಡಿದ್ದೇನೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲಿದ್ದೇವೆ ಎಂದು ಹೇಳಿದರು. ಈ ಸಂಬಂಧ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸುತ್ತೇನೆ. ಅಧಿಕಾರಿಗಳ ಲೋಪವಾಗಿದ್ದರೆ ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದರು.

ಹೊತ್ತಿ ಉರಿದ ರಾಸಾಯನಿಕಗಳ ಗೋದಾಮಿನ ಬೆಂಕಿ ನಂದಿಸುವಲ್ಲಿ ಅಗ್ನಿಶಾಮಕ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಸುಮಾರು 48 ಅಗ್ನಿಶಾಮಕ ವಾಹನ ಬೆಂಕಿ ನಂದಿಸಿವೆ. ಫ್ಯಾಕ್ಟರಿ ನಿರ್ಮಿಸಲು ಬಿಬಿಎಂಪಿ ಫಯರ್ ಡಿಪಾರ್ಟ್‍ಮೆಂಟ್ ಹಾಗೂ ಇತರೆ ಇಲಾಖೆಗಳಿಂದ ಅನುಮತಿ ಪಡೆದಿದ್ದರಾ ಎಂಬ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ ಎಂದು ವಿವರಿಸಿದರು.

ಯಾವುದೇ ಅಧಿಕಾರಿ ಲಾಭಕ್ಕಾಗಿ ಇಂತಹ ಗೋದಾಮಿಗೆ ಅನುಮತಿ ನೀಡಿದ್ದರೆ ಅಂತಹ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.

Facebook Comments