ಕೊರೊನಾ ಮುನ್ನೆಚ್ಚರಿಕೆ ಕುರಿತು ಅಧಿಕಾರಿಗಳೊಂದಿಗೆ ಸಮಗ್ರ ಚರ್ಚೆ :ಬೊಮ್ಮಾಯಿ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಏ.16- ಕೋವಿಡ್ ಸೋಂಕು ತೀವ್ರಗತಿಯಲ್ಲಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಗೃಹ ಇಲಾಖೆ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆಗಳ ಬಗ್ಗೆ ಹಿರಿಯ ಅಧಿಕಾರಿಗಳೊಂದಿಗೆ ಸಮಗ್ರ ಚರ್ಚೆ ಮಾಡಲಾಗಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ಸೋಂಕು ನಿಯಂತ್ರಣ ಮಾಡುವಲ್ಲಿ ಗೃಹ ಇಲಾಖೆಯ ಪಾತ್ರ, ಇಲಾಖೆಯ ಸಿಬ್ಬಂದಿಯ ಸುರಕ್ಷತೆ, ಕಳೆದ ಬಾರಿ ಕೈಗೊಂಡ ಕ್ರಮಗಳು, ಈ ಬಾರಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆಗಳ ಬಗ್ಗೆ ಚರ್ಚೆ ಮಾಡಲಾಗಿದೆ.

ಅಲ್ಲದೆ ಕೋವಿಡ್‍ಗೆ ಸಂಬಂಧಿಸಿದ ಔಷಧಿಗಳ ದರ ಹೆಚ್ಚಳ, ಮಾರಾಟ, ಕೃತಕ ಅಭಾವ ಸೃಷ್ಟಿ ಮಾಡಲಾಗುತ್ತಿದೆ ಎಂಬ ಮಾಧ್ಯಮಗಳ ವರದಿ ಹಿನ್ನೆಲೆಯಲ್ಲಿ ಚರ್ಚೆ ಮಾಡಲಾಗಿದೆ. ಹೈಕೋರ್ಟ್‍ನ ಆದೇಶ, ಮುಖ್ಯಮಂತ್ರಿ ನೀಡುವ ನಿರ್ದೇಶನ, ಆದೇಶಗಳ ಪಾಲನೆ ಬಗ್ಗೆ ಚರ್ಚಿಸಲಾಗಿದೆ. ಎಲ್ಲವೂ ಮುಖ್ಯಮಂತ್ರಿ ಗಳು ನೀಡುವ ನಿರ್ದೇಶನದ ಮೇಲೆ ಅವಲಂಬನೆಯಾಗಿದ್ದು, ತಕ್ಷಣಕ್ಕೆ ಯಾವುದೇ ನಿರ್ಧಾರವನ್ನು ಕೈಗೊಂಡಿಲ್ಲ ಎಂದು ಸ್ಪಷ್ಟಪಡಿಸಿದರು.

Facebook Comments