ಮುಂದಿನ ವಾರ ರಾಜ್ಯದಲ್ಲಿ ಹೊಸ ಸರ್ಕಾರ ರಚನೆ : ಬೊಮ್ಮಾಯಿ

ಈ ಸುದ್ದಿಯನ್ನು ಶೇರ್ ಮಾಡಿ

ಬೆಳಗಾವಿ,ಮೇ 24- ಮುಂದಿನ ವಾರ ರಾಜ್ಯ ರಾಜಕಾರಣದಲ್ಲಿ ಹೊಸ ಸರ್ಕಾರ ರಚನೆಯಾಗಲಿದೆ ಎಂದು ಬಿಜೆಪಿ ಮುಖಂಡ, ಮಾಜಿ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ನಿರೀಕ್ಷೆಗೂ ಮೀರಿದ ಫಲಿತಾಂಶ ಬಿಜೆಪಿ ಪರವಾಗಿ ಬಂದಿದೆ. ಇದರಿಂದ ಕಾಂಗ್ರೆಸ್ ಪಕ್ಷದಲ್ಲಿ ದೊಡ್ಡ ಮಟ್ಟದ ಪರಿಣಾಮ ಬೀರಲಿದೆ.

ಕಾಂಗ್ರೆಸ್‍ನಲ್ಲಾಗುವ ಪರಿಣಾಮದಿಂದ ದೊಡ್ಡ ಬದಲಾವಣೆಯಾಗುವ ಸಾಧ್ಯತೆಯಿದೆ. ಮುಂದಿನ ವಾರವೇ ರಾಜ್ಯ ರಾಜಕಾರಣದಲ್ಲಿ ಮಹತ್ತರ ಬದಲಾವಣೆಯಾಗುವ ನಿರೀಕ್ಷೆಯಿದೆ ಎಂದು ಮಾಜಿ ಸಚಿವರು ಹೇಳಿದರು.

ಹೀನಾಯ ಸೋಲಿನಿಂದ ಕಾಂಗ್ರೆಸ್ ನಾಯಕರು ಆತ್ಮಾವಲೋಕನ ಮಾಡಿಕೊಳ್ಳಬೇಕು. ರಾಜಕಾರಣದಲ್ಲಾಗುವ ಬದಲಾವಣೆಯಿಂದ ಮುಂದಿನ ದಿನಗಳಲ್ಲಿ ಬಿಜೆಪಿ ಸರ್ಕಾರ ರಚನೆಯಾಗಿ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ತಿಳಿಸಿದರು.

ಸಮ್ಮಿಶ್ರ ಸರ್ಕಾರದಿಂದ ಜನ ಬೇಸತ್ತಿದ್ದಾರೆ. ಅದರ ವಿರುದ್ಧ ಜನಾದೇಶ ಬಂದಿದೆ. ದೇಶದಲೆಲ್ಲ ಬಿಜೆಪಿ ನಿರೀಕ್ಷೆಗೂ ಮೀರಿ ಸ್ಥಾನಗಳನ್ನು ಗಳಿಸಿದೆ. ಮೋದಿಯವರು 2ನೇ ಬಾರಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇಷ್ಟು ದೊಡ್ಡ ಪ್ರಮಾಣದಲ್ಲಿ ಬಿಜೆಪಿಯನ್ನು ಬೆಂಬಲಿಸಿದ ಮತದಾರರಿಗೆ ಅಭಿನಂದನೆ ಸಲ್ಲಿಸಿದರು.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin