ನೇತಾಜಿ ಭಾರತ ಮಾತೆಯ ನೈಜ ಪುತ್ರ : ಮೋದಿ ಬಣ್ಣನೆ

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ,ಜ.23-ಸ್ವಾತಂತ್ರಕ್ಕಾಗಿ ನೇತಾಜಿ ಸುಭಾಷ್‍ಚಂದ್ರ ಬೋಸ್ ಅವರ ತ್ಯಾಗ ಮತ್ತು ಬಲಿದಾನವನ್ನು ಭಾರತೀಯರು ಎಂದಿಗೂ ಮರೆಯುವಂತಿಲ್ಲ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಬಣ್ಣಿಸಿದ್ದಾರೆ. ಸ್ವಾತಂತ್ರ್ಯ ಹೋರಾಟಗಾರ ಸುಭಾಷ್‍ಚಂದ್ರ ಬೋಸ್ ಅವರ ಜನ್ಮ ದಿನಾಚರಣೆ ಸಂದರ್ಭದಲ್ಲಿ ಟ್ವೀಟ್ ಮಾಡಿರುವ ಮೋದಿ ಅವರು, ಬೋಸ್ ಸ್ವಾತಂತ್ರ್ಯ ಹೋರಾಟಗಾರರಾಗಿದ್ದರು ಮತ್ತು ಭಾರತ ಮಾತೆಯ ನೈಜ ಪುತ್ರರಾಗಿದ್ದರು ಎಂದು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಅಂತಹ ಮಹಾನ್ ನಾಯಕನ ತ್ಯಾಗ, ಬಲಿದಾನವನ್ನು ಮರೆಯಬಾರದು ಎಂಬ ಉದ್ದೇಶದಿಂದಲೇ ಕೇಂದ್ರ ಸರ್ಕಾರ ಬೋಸ್ ಅವರ ಜನ್ಮ ದಿನಾಚರಣೆ ದಿನವನ್ನು ಪರಾಕ್ರಮ್ ದಿವಸ್ ಆಗಿ ಆಚರಿಸಲು ತೀರ್ಮಾನಿಸಿದೆ.

ಬೋಸ್ ಜನ್ಮ ದಿನಾಚರಣೆ ಅಂಗವಾಗಿ ಕೋಲ್ಕತ್ತಾದಲ್ಲಿ ಆಯೋಜಿಸಿರುವ ಪರಾಕ್ರಮ್ ದಿವಸ್ ಕಾರ್ಯಕ್ರಮದಲ್ಲಿ ಮೋದಿ ಅವರು ಪಾಲ್ಗೊಳ್ಳಲಿದ್ದು, ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

Facebook Comments