ಜಲಿಯನ್ ವಾಲಾಬಾಗ್ ಹತ್ಯಾಕಾಂಡಕ್ಕೆ 101 ವರ್ಷ, ಹುತಾತ್ಮರಿಗೆ ಗಣ್ಯರ ನಮನ

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ/ಅಮೃತಸರ, ಏ.13- ಪಂಜಾಬïನ ಅಮೃತಸರದಲ್ಲಿ ನಡೆದ ಭೀಕರ ಜಲಿಯನ್ ವಾಲಾಬಾಗ್ ಹತ್ಯಾಕಾಂಡಕ್ಕೆ ಇಂದು 101 ವರ್ಷ. ಈ ಸಂದರ್ಭದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಮತ್ತು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ಹುತ್ಮಾತರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ-ಬಲಿದಾನವನ್ನು ಸ್ಮರಿಸಿದ್ದಾರೆ. ನೂರು ವರ್ಷಗಳ ಹಿಂದೆ ಇದೇ ದಿನ ನಮ್ಮ ಧೀಮಂತ ಸ್ವಾತಂತ್ರ್ಯ ಹೋರಾಟಗಾರರು ಜಲಿಯನ್ ವಾಲಾಬಾಗ್ ಹತ್ಯಾಕಾಂಡದಲ್ಲಿ ಹುತಾತ್ಮರಾದರು.

ಇದೊಂದು ಅತ್ಯಂತ ಭೀಕರ ನರಮೇಧ. ನಾಗರಿಕತೆಗೆ ಅಂಟಿದ ಕಳಂಕ ಆ ದಿನ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ- ಬಲಿದಾನವನ್ನು ಭಾರತ ಎಂದಿಗೂ ಮೆರೆಯುವುದಿಲ್ಲ. ಈ ಸಂದರ್ಭದಲ್ಲಿ ನಾವು ಜಲಿಯನ್ ವಾ ಲಾಬಾಗ್ ಹತ್ಮಾತರಿಗೆ ಶ್ರದ್ಧಾಂಜಲಿ ಸಲ್ಲಿಸುತ್ತೇವೆ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಟ್ವಿಟರ್‍ನಲ್ಲಿ ಹೇಳಿದ್ದಾರೆ.

ಜಲಿಯನ್ ವಾಲಾಬಾಗ್ ಹತ್ಯಾಕಾಂಡದ ದುರಂತ ದಿನವನ್ನು ಟ್ವಿಟರ್ ನಲ್ಲಿ ಸ್ಮರಿಸಿರುವ ಪ್ರಧಾನಿ ನರೇಂದ್ರ ಮೋದಿ, ಈ ನರಮೇಧದಲ್ಲಿ ಮಡಿದವರೆಲ್ಲರಿಗೂ ಶ್ರದ್ದಾಂಜಲಿ ಸಲ್ಲಿಸುವುದಾಗಿ ತಿಳಿಸಿದ್ದಾರೆ. ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಮತ್ತು ಬಲಿದಾನವನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ.

ಹುತಾತ್ಮರ ಸ್ಮರಣೆಯು ಭಾರತವನ್ನು ಮತ್ತಷ್ಟು ಸದೃಢವಾಗಿ ನಿರ್ಮಿಸಲು ನಾವು ಮತ್ತಷ್ಟು ಶ್ರಮಿಸುವಂತೆ ಪ್ರೇರಣೆ ನೀಡಿದೆ. ಹುತಾತ್ಮರು ಈ ದೇಶದ ಗೌರವ ಮತ್ತು ಹೆಮ್ಮೆ ಎಂದು ತಿಳಿಸಿದ್ದಾರೆ. 101 ವರ್ಷಗಳ ಹಿಂದೆ ಆ ದಿನ ಪಂಜಾಬïನ ಅಮೃತಸರದಲ್ಲಿ 739 ಮುಗ್ಧ ಜನರ ನರಮೇಧಕ್ಕೆ ಕಾರಣವಾದ ಘೋರ ಜಲಿಯನ್‍ವಾಲಾಬಾಗ್ ಹತ್ಯಾಕಾಂಡಕ್ಕೆ ಇಂದು 101ವರ್ಷ.

ಭಾರತದಲ್ಲಿ ಸ್ವಾತಂತ್ರ್ಯಸಂಗ್ರಾಮ ಹಾಗೂ ಕ್ರಾಂತಿಕಾರಿ ಚಟುವಟಿಕೆಗಳನ್ನು ಹತ್ತಿಕ್ಕಲು ಬ್ರಿಟೀಷರು ಒಂದೆಡೆ ಒಡೆದು ಆಳುವ ನೀತಿಯನ್ನು ಅನುಸರಿಸಿದರೆ ಇನ್ನೊಂದೆಡೆ ದಮನಕಾರಿ ಕರಾಳ ಕಾಯ್ದೆ-ಮಸೂದೆಗಳನ್ನು ಜಾರಿಗೊಳಿಸಿದರು.

ಇಂಥ ಕ್ರೂರ ಕಾಯ್ದೆಯಲ್ಲಿ ರೌಲತ್ಮಸೂದೆ ಕೂಡ ಒಂದು. ಈ ಕಾಯ್ದೆಗಳಿಂದ ಆದ ಚಳವಳಿಗಳು 13 ಏಪ್ರಿಲ್ 1919ರಂದು ಪಂಜಾಬ್ ನ ಅಮೃತಸರದಲ್ಲಿ ನಡೆದ ಜಲಿಯನ್ ವಾಲಾಬಾಗ್ ಹತ್ಯಾಕಾಂಡದಲ್ಲಿ ಪರ್ಯವಸಾನವಾಯಿತು. ಇದನ್ನು ಅಮೃತಸರದ ನರಮೇಧ ಎಂದು ಹೆಸರಿಸಲಾಗಿದೆ.

ಬ್ರಿಟಿಷ್ ಸೈನ್ಯದ ಕಮಾಂಡರ್ ಆಗಿದ್ದ ಜನರಲ್ ಡಯ್ಯರ್ ತನ್ನ ಸೈನಿಕರಿಗೆ ಸುಮಾರು ಹತ್ತು ಸಾವಿರದಷ್ಟಿದ್ದ ನಿಶ್ಯಸ್ತ್ರ ಮತ್ತು ಅಮಾಯಕ ಜನರ ಮೇಲೆ ಗುಂಡು ಹಾರಿಸಲು ಆಜ್ಞೆ ನೀಡಿದ.  ಈ ಘಟನೆಯಲ್ಲಿ ಒಟ್ಟು 1,650 ಸುತ್ತು ಗುಂಡುಗಳನ್ನು ಹಾರಿಸಲಾಯಿತು. 739 ಮಂದಿ ದುರಂತ ಸಾವಿಗೀಡಾಗಿ 1,137 ಜನರು ಗಾಯಗೊಂಡರು.

Facebook Comments

Sri Raghav

Admin