ಬೌರಿಂಗ್ ಆಸ್ಪತ್ರೆ ನಿರ್ದೇಶಕರ ಎತ್ತಂಗಡಿ, ಹಿರಿಯ ವೈದ್ಯರ ಅಸಮಾಧಾನ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಜು.9- ಕೊರೊನಾ ನಿಯಂತ್ರಣ ಮಾಡುವಲ್ಲಿ ಸಾರ್ವಜನಿಕರ ಕೆಂಗೆಣ್ಣಿಗೆ ಗುರಿಯಾಗಿರುವ ರಾಜ್ಯ ಸರ್ಕಾರ ಮತ್ತೊಂದು ಎಡವಟ್ಟು ಮಾಡಿಕೊಂಡಿದೆ.

ಆಸ್ಪತ್ರೆಗೆ ಸಂಬಂಧವೇ ಇಲ್ಲದ ಬೆಂಗಳೂರು ವೈದ್ಯಕೀಯ ಕಾಲೇಜಿನ ಮೂಳೆ ಚಿಕಿತ್ಸೆ(ಆರ್ಥೋಪೆಡಿಕ್) ತಜ್ಞ ಡಾ.ಮನೋಜ್‍ಕುಮಾರ್ ಅವರನ್ನು ಬೌರಿಂಗ್ ಆಸ್ಪತ್ರೆಯ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದೆ.

ಹಾಲಿ ಬೌರಿಂಗ್ ಆಸ್ಪತ್ರೆಯ ನಿರ್ದೇಶಕರಾಗಿದ್ದ ಡಾ.ಕೆ.ಎಸ್.ಮಂಜುನಾಥ್ ಅವರನ್ನು 6 ವಾರಗಳ ಕಾಲ ಸರ್ಕಾರ ರಜೆಗೆ ಕಳುಹಿಸಿದೆ.  ತೆರವಾಗಿದ್ದ ಈ ಸ್ಥಾನಕ್ಕೆ ರಾತ್ರೋರಾತ್ರಿ ಬೆಂಗಳೂರು ವೈದ್ಯಕೀಯ ಕಾಲೇಜಿನ ಮೂಳೆ ತಜ್ಞ ಡಾ.ಮನೋಜ್‍ಕುಮಾರ್ ಅವರನ್ನು ನಿರ್ದೇಶಕರನ್ನಾಗಿ ನೇಮಿಸಿರುವುದು ವಿವಾದದ ಕಿಡಿ ಹೊತ್ತಿಸಿದೆ. ಅವರ ನೇಮಕಕ್ಕೆ ಖುದ್ದು ಬೌರಿಂಗ್ ಆಸ್ಪತ್ರೆಯ ವೈದ್ಯರೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸರ್ಜರಿ ವಿಭಾಗದ ಮುಖ್ಯಸ್ಥೆಡಾ.ವಿಜಯಲಕ್ಷ್ಮಿಜಿ.ಎನ್, ಸೈಕಾಲಿಜಿ ವಿಭಾಗದ ಶ್ರೀನಿವಾಸಲು ನಾಯ್ಡು, ಅನೋಟಮಿ ವಿಭಾಗದ ಮುಖ್ಯಸ್ಥೆ ಮೀನಾಕ್ಷಿ ಪಾರ್ಥಸಾರಥಿ ಅವರುಗಳು ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ನಿಯಮಗಳ ಪ್ರಕಾರ ಬೌರಿಂಗ್ ಆಸ್ಪತ್ರೆಯಲ್ಲಿರುವ ತಜ್ಞರೊಬ್ಬರನ್ನು ನಿರ್ದೇಶಕರನ್ನಾಗಿ ನೇಮಕ ಮಾಡಬೇಕು.

ಈಗ ನೇಮಕವಾಗಿರುವ ಡಾ.ಮನೋಜ್‍ಕುಮಾರ್ ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋ ಧನಾ ಕೇಂದ್ರದಲ್ಲಿ ಬೋಧಕರಾಗಿದ್ದಾರೆ.

ಹೀಗಾಗಿ ಅವರನ್ನು ನೇಮಿಸಿರುವುದು ಸರಿಯಲ್ಲ ಎಂದು ಈ ಮೂವರು ತಜ್ಞರು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರಿಗೆ ಪತ್ರ ಬರೆದು ಬಹಿರಂಗ ವಾಗಿಯೇ ಅಸಮಾಧಾನ ಹೊರಹಾಕಿದ್ದಾರೆ.

Facebook Comments