ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಬ್ರೆಜಿಲ್ ಅಧ್ಯಕ್ಷ ಜೈರ್

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ, ಜ.24-ಈ ಬಾರಿಯ ಗಣರಾಜ್ಯೋತ್ಸವ ದಿನಾಚರಣೆಗೆ ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸನಾರೊ ಮುಖ್ಯ ಅತಿಥಿಯಾಗಲಿದ್ದಾರೆ. ಅವರು ಇಂದಿನಿಂದ ಇದೇ 27ರವರೆಗೆ ಭಾರತ ಪ್ರವಾಸ ಕೈಗೊಂಡಿದ್ದು, ದೆಹಲಿಯ ರಾಜ್‍ಪಥ್‍ನಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕೂಡ ಭಾಗವಹಿಸಲಿದ್ದಾರೆ.

ಬೋಲ್ಸನಾರೊ ಅವರ ಜೊತೆಗೆ ಅವರ ಸಂಪುಟದ 8 ಸಚಿವರು, ಬ್ರೆಜಿಲ್ ಸಂಸತ್ತಿನ ನಾಲ್ವರು ಸದಸ್ಯರು, ಹಿರಿಯ ಅಧಿಕಾರಿಗಳು ಮತ್ತು ಉದ್ಯಮಿಗಳ ನಿಯೋಗ ಭಾರತಕ್ಕೆ ಆಗಮಿಸಿದ್ದಾರೆ. ಬ್ರೆಜಿಲ್‍ನ ಅಧ್ಯಕ್ಷರು ಗಣರಾಜ್ಯೋತ್ಸವ ಕಾರ್ಯಕ್ರಮದ ಅತಿಥಿಗಳಾಗುತ್ತಿರುವುದು ಇದು ಮೂರನೇ ಸಲ.

2004ರಲ್ಲಿ ಬ್ರೆಜಿಲ್ ಅಧ್ಯಕ್ಷರು ಗಣರಾಜ್ಯೋತ್ಸವದ ಮುಖ್ಯ ಅತಿಥಿಗಳಾಗಿದ್ದರು. ಬೊಲ್ಸೊನಾರೊ ಅವರ ಮೊದಲ ಭಾರತ ಭೇಟಿ ಇದಾಗಿದ್ದು ಇವರು ಕಳೆದ ವರ್ಷ ಜನವರಿ 1ರಂದು ಬ್ರೆಜಿಲ್ ಅಧ್ಯಕ್ಷರಾಗಿ ಪ್ರಮಾಣವಚನ ಸ್ವೀಕರಿಸಿದ್ದರು.

Facebook Comments