ರಾಜ್ಯದ 4 ವಿಭಾಗಗಳಲ್ಲಿ ತಾಯಂದಿರ ಎದೆಹಾಲಿನ ಬ್ಯಾಂಕ್

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಮಾ.8- ರಾಜ್ಯದ ನಾಲ್ಕು ವಿಭಾಗಗಳಲ್ಲಿ ತಾಯಂದಿರ ಎದೆಹಾಲಿನ ಬ್ಯಾಂಕ್‍ಗಳನ್ನು ಒಟ್ಟು 2.5 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲು ನಿರ್ಧರಿಸಲಾಗಿದೆ. ಇಂದು ಆಯವ್ಯಯ ಮಂಡಿಸಿ ಈ ವಿಷಯ ಪ್ರಸ್ತಾಪಿಸಿದ ಮುಖ್ಯಮಂತ್ರಿ ಯಡಿಯೂರಪ್ಪ, ತಾಯಿ ಹಾಲು ಕೊರತೆ ಇರುವ ನವಜಾತ ಶಿಶುಗಳಿಗೆ ಸಕಾಲದಲ್ಲಿ ಸುರಕ್ಷಿತ ಮತ್ತು ಉತ್ತಮ ಗುಣಮಟ್ಟದ ಎದೆ ಹಾಲು ನೀಡಿ ಅಪೌಷ್ಠಿಕತೆ ತಡೆಗಟ್ಟಲು ರಾಜ್ಯದ ನಾಲ್ಕು ವಿಭಾಗಗಳಲ್ಲಿ ತಾಯಂದಿರ ಎದೆಹಾಲಿನ ಬ್ಯಾಂಕ್‍ಗಳನ್ನು ಸ್ಥಾಪಿಸಲಾಗುವುದು ಎಂದು ತಿಳಿಸಿದ್ದಾರೆ.

ತಾಯಿ ಮತ್ತು ಮಕ್ಕಳ ಆರೋಗ್ಯಕ್ಕಾಗಿ ಗರ್ಭಾವಸ್ಥೆಯಲ್ಲಿ ಉತ್ತಮ ಗುಣಮಟ್ಟದ ಆರೈಕೆ ನೀಡಲು ಹಾಗೂ ತೊಡಕುಗಳನ್ನು ಮುಂಚಿತವಾಗಿಯೇ ಪತ್ತೆ ಹಚ್ಚಲು ಗರ್ಭಿಣಿಯರಿಗೆ ಸ್ಕ್ಯಾನಿಂಗ್ ಮಾಡುವುದನ್ನು ಉತ್ತೇಜಿಸಲು 10 ಕೋಟಿ ವೆಚ್ಚದಲ್ಲಿ ಚಿಗುರು ಕಾರ್ಯಕ್ರಮ ಆರಂಭಿಸಲಾಗುವುದು.

[ ಕರ್ನಾಟಕ ಬಜೆಟ್ – 2021 (All Updates) ]

Facebook Comments

Sri Raghav

Admin