ಮಗು ಅತ್ತಿದ್ದಕ್ಕೆ ಭಾರತೀಯ ಕುಟುಂಬವನ್ನು ವಿಮಾನದಿಂದ ಕೆಳಗಿಳಿಸಿದ ಬ್ರಿಟಿಷ್ ಏರ್‍ವೇಸ್

ಈ ಸುದ್ದಿಯನ್ನು ಶೇರ್ ಮಾಡಿ

British--01

ನವದೆಹಲಿ, ಆ.9-ಮಗು ಅಳುತ್ತಿದೆ ಎಂಬ ಕಾರಣಕ್ಕಾಗಿ ಭಾರತೀಯ ಕುಟುಂಬದ ಸದಸ್ಯರನ್ನು ವಿಮಾನದಿಂದ ಕೆಳಗಿಳಿಸಿ ಬ್ರಿಟಿಷ್ ಏರ್‍ವೇಸ್ ವಿಮಾನದ ಸಿಬ್ಬಂದಿ ಉದ್ಧಟತನದ ಪ್ರದರ್ಶಿಸಿರುವ ಘಟನೆ ನಡೆದಿದೆ. ಇದು ಜನಾಂಗೀಯ ದ್ವೇಷದ ಘಟನೆ ಎಂಬ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಭಾರತ ಮತ್ತು ಬ್ರಿಟಿಷ್ ವಿಮಾನ ಸಂಸ್ಥೆ ಅಧಿಕಾರಿಗಳ ನಡುವೆ ವಿವಾದಕ್ಕೆ ಕಾರಣವಾಗಿದೆ.

ಈ ಸಂಬಂಧ ಉನ್ನತಾಧಿಕಾರಿಯೊಬ್ಬರು ಭಾರತದ ಸಂತ್ರಸ್ತ ಕುಟುಂಬಕ್ಕೆ ಆಗಿರುವ ಅನ್ಯಾಯದ ಬಗ್ಗೆ ನಾಗರಿಕ ವಿಮಾನಯಾನ ಖಾತೆ ಸಚಿವ ಸುರೇಶ್‍ಪ್ರಭು ಅವರಿಗೆ ಪತ್ರ ಬರೆದಿದ್ದಾರೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರ್ಕಾರದ ನಾಗರಿಕ ವಿಮಾನಯಾನ ಸಚಿವಾಲಯವು ಬ್ರಿಟಿಷ್ ಏರ್‍ವೇಸ್‍ನಿಂದ ಹೆಚ್ಚಿನ ವಿವರ ಕೋರಿದ್ದು, ಅದನ್ನಾಧರಿಸಿ ಮುಂದಿನ ಕ್ರಮ ಕೈಗೊಳ್ಳಲಿದೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin