ತಮ್ಮನಿಗೆ ಕೊರೊನಾ ಪಾಸಿಟಿವ್, ಮನನೊಂದು ಅಣ್ಣ ಆತ್ಮಹತ್ಯೆ..!

ಈ ಸುದ್ದಿಯನ್ನು ಶೇರ್ ಮಾಡಿ

ಕೋಲಾರ, ಜು.19- ತಮ್ಮನಿಗೆ ಕೊರೊನಾ ಸೋಂಕು ದೃಢವಾದ ಹಿನ್ನೆಲೆಯಲ್ಲಿ ಮನನೊಂದು ಅಣ್ಣ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗಾಂಧಿನಗರದಲ್ಲಿ ನಡೆದಿದೆ.

ನಾಗರಾಜ್ (37) ಆತ್ಮಹತ್ಯೆ ಮಾಡಿಕೊಂಡ ಅಣ್ಣ. ತಮ್ಮನಿಗೆ ಕೊರೊನಾ ಲಕ್ಷಣಗಳು ಕಂಡುಬಂದಿದ್ದು, ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸೋಂಕು ದೃಢವಾದ ಹಿನ್ನೆಲೆಯಲ್ಲಿ ಆತಂಕಕ್ಕೀಡಾದ ಸಹೋದರ ನಾಗರಾಜ್ ಕೂಲಿ ಕೆಲಸ ಮುಗಿಸಿಕೊಂಡು ಮನೆಗೆ ಬಂದ ಸ್ವಲ್ಪ ಸಮಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಪ್ರಾಥಮಿಕ ಸಂಪರ್ಕದಲ್ಲಿದ್ದ ಅಣ್ಣ ಹಾಗೂ ಕುಟುಂಬಸ್ಥರಿಗೂ ಕೊರೊನಾ ತಗುಲಿರುವ ಆತಂಕದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

ಈ ಸಂಬಂಧ ಗಲ್‍ಪೇಟೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Facebook Comments

Sri Raghav

Admin