ಯಡಿಯೂರಪ್ಪನವರ ಯಾತ್ರೆಗೆ ನಮ್ಮ ಅಡ್ಡಿ ಇಲ್ಲ : ಸಿಎಂ

ಈ ಸುದ್ದಿಯನ್ನು ಶೇರ್ ಮಾಡಿ

ಬೆಳಗಾವಿ,ಸೆ.26- ಚಳಿಗಾಲದ ಅಧಿವೇಶನವನ್ನು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಸುತ್ತೇವೆ. ಈ ಕುರಿತು ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತ ನಾಡಿದ ಅವರು, ಚಳಿಗಾಲದ ಅವೇಶನವನ್ನು ಸುವರ್ಣಸೌಧದಲ್ಲಿ ನಡೆಸುವುದಾಗಿ ಸ್ಪಷ್ಟಪಡಿಸಿದರು.

ಸುವರ್ಣಸೌಧದಲ್ಲಿ ಯಾವ ಯಾವ ಕಚೇರಿಗಳನ್ನು ಆರಂಭಿಸಬೇಕೋ ಅವುಗಳನ್ನು ಡಿಸೆಂಬರ್ ಒಳಗೆ ಆರಂಭ ಮಾಡುತ್ತೇವೆ ಎಂದು ತಿಳಿಸಿದರು. ಬೆಳಗಾವಿಯಲ್ಲಿ ಸಕ್ಕರೆ ನಿರ್ದೇಶನಾಲಯ ಕಚೇರಿ ಆರಂಭ ಮಾಡಲು ಆದೇಶ ಮಾಡಿದ್ದೇನೆ. ಅಕ್ಟೋಬರ್ 3ರಿಂದ ಸಕ್ಕರೆ ನಿರ್ದೇಶನಾಲಯ ಕಾರ್ಯಾರಂಭ ಮಾಡಲಿದೆ ಎಂದು ಹೇಳಿದರು.

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ರಾಜ್ಯ ಪ್ರವಾಸಕ್ಕೆ ಬ್ರೇಕ್ ವಿಚಾರಕ್ಕೆ ಸಂಬಂಸಿದಂತೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಎಂ ಈ ಕುರಿತು ಈಗಾಗಲೇ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಸ್ಪಷ್ಟನೆ ನೀಡಿದ್ದಾರೆ. ಯಡಿಯೂರಪ್ಪ ಅವರಿಗೆ ಪ್ರವಾಸ ಮಾಡಲು ಯಾವುದೇ ತೊಂದರೆಯಿಲ್ಲ ಎಂದು ಹೇಳಿದ್ದಾರೆ. ಈ ಕುರಿತು ನಾನು ಹೆಚ್ಚಿಗೆ ಏನನ್ನೂ ಹೇಳುವುದಿಲ್ಲ ಎಂದು ತಿಳಿಸಿದರು.

ನಾಳಿನ ಭಾರತ್ ಬಂದ್ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಈಗಾಗಲೇ ಕೋವಿಡ್‍ನಿಂದ ಜನ ಸಂಕಷ್ಟದಲ್ಲಿದ್ದಾರೆ. ಬಂದ್‍ನಿಂದ ರೈತರು, ವ್ಯಾಪಾರಸ್ಥರು ಸಾರ್ವಜನಿಕರಿಗೆ ತೊಂದರೆಯಾಗುತ್ತದೆ. ದಯವಿಟ್ಟು ರೈತರು, ರೈತ ಸಂಘಟನೆಗಳು ಸಹಕರಿಸಬೇಕೆಂದು ಮನವಿ ಮಾಡಿದರು.

ಇದಕ್ಕೂ ಮುನ್ನ ಮುಖ್ಯಮಂತ್ರಿಗಳು ಶಾಸಕ ಅಭಯ್ ಪಾಟೀಲ್ ಅವರು ಆಗಮಿಸಿ ಉಪಹಾರಕೂಟದಲ್ಲಿ ಭಾಗವಹಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‍ಕುಮಾರ್ ಕಟೀಲ್ ಜಿಲ್ಲಾ ಉಸ್ತುವಾರಿ ಗೋವಿಂದ ಕಾರಜೋಳ, ಸಚಿವರಾದ ಉಮೇಶ್ ಕತ್ತಿ, ಭೈರತಿ ಬಸವರಾಜ್, ಮಾಜಿ ಸಚಿವ ಲಕ್ಷ್ಮಣ್ ಸವದಿ, ಸಂಸದ ಅಣ್ಣಾ ಸಾಹೇಬ್ ಜೊಲ್ಲೆ ಮತ್ತಿತರರು ಹಾಜರಿದ್ದರು.

Facebook Comments