ಸಿದ್ದರಾಮಯ್ಯನವರ ಧಿಮಾಕಿನ ಮಾತುಗಳಿಗೆ ಯಾರು ಬೆಲೆ ಕೊಡುವುದಿಲ್ಲ: ಬಿಎಸ್‌ವೈ

ಈ ಸುದ್ದಿಯನ್ನು ಶೇರ್ ಮಾಡಿ

ದಾವಣಗೆರೆ, ಡಿ.5- ಸಿದ್ದರಾಮಯ್ಯ ನವರು ವಿಪಕ್ಷದ ನಾಯಕರೆಂಬುದನ್ನು ಮರೆತು ಬಹಳ ಹಗುರವಾಗಿ ಮಾತನಾಡುತ್ತಿದ್ದಾರೆ, ಸೊಕ್ಕಿನ, ಧಿಮಾಕಿನ ಮಾತುಗಳಿಗೆ ಯಾರು ಬೆಲೆ ಕೊಡುವುದಿಲ್ಲ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರು ವಾಗ್ದಾಳಿ ಮಾಡಿದರು.

ದಾವಣಗೆರೆ ತಾಲೂಕಿನ ಆನಗೋಡು ಗ್ರಾಮದಲ್ಲಿ ನಡೆದ ಪರಿಷತ್ ಚುನಾವಣೆಯ ಪ್ರಚಾರ ಸಭೆಗೆ ಹಾಜರಾಗುವ ಮುನ್ನ ಜೆಡಿಎಸ್ ಬಿಜೆಪಿಯ ಬಿ ಟೀಂ ಎಂಬ ಸಿದ್ದರಾಮಯ್ಯನವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು ಹಗುರವಾಗಿ ಮಾತನಾಡುತ್ತಿದ್ದಾರೆ ಫಲಿತಾಂಶ ಬಂದಾದ ಬಳಿಕ ಅವರಿಗೆ ತಿಳಿಯುತ್ತದೆ, ಮಾತುಗಳಿಗೆ ಯಾರು ಬೆಲೆ ಕೊಡುವುದಿಲ್ಲ, ಮತದಾರರು ಇದೀಗ ಜಾಗೃತರಾಗಿದ್ದಾರೆ, ಅವರಿಗೆ ಯಾವುದು ಸರಿ ಯಾವುದು ತಪ್ಪು ಎಂದು ತಿಳಿಯುತ್ತಿದ್ದಾರೆ.

ಮೈಸೂರಿನ ಚಾಮುಂಡೇಶ್ವರಿ ಮತ ಕ್ಷೇತ್ರದಲ್ಲಿ ಸೋತ ಸಿದ್ದರಾಮಯ್ಯ ಇಷ್ಟೊಂದು ಹಗುರವಾಗಿ ಮಾತನಾಡುವುದು ಅವರಿಗೆ ಶೋಭೆ ತರುವುವಂತಹದ್ದಲ್ಲ, ಇಷ್ಟಾದರು ಬುದ್ದಿ ಕಲಿಯದ ಸಿದ್ದರಾಮಯ್ಯ ಇನ್ನಾದರು ಗೌರವಯುತವಾಗಿ ಮಾತನಾಡುವುದನ್ನು ಕಲಿಯಬೇಕಾಗಿದೆ ಎಂದು ಹೇಳಿದರು.

ಸಂಪುಟ ಪುನಃ ರಚನೆ ಮಾಡುವುದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರಿಗೆ ಬಿಟ್ಟ ವಿಚಾರ, ಯಾರಿಗೆ ಮಂತ್ರಿಯಾಗಿ ಮಾಡೇಕೆಂಬುದು ಸಿಎಂಗೆ ಬಿಟ್ಟ ವಿಚಾರ ಅವರು ಏನ್ ಮಾಡ್ತಾರೆ ಎಂಬುದು ನೋಡೋಣ, ಸಂಪುಟ ಪುನಃ ರಚನೆಯಾಗಬಹುದೆಂಬ ನಿರೀಕ್ಷೆ ಇದೆ ಎಂದು ತಿಳಿಸಿದರು.

ವಿಧಾನ ಪರಿಷತ್ ಚುನಾವಣೆಯಲ್ಲಿ ಎಲ್ಲಿ ನಿಮ್ಮ ಅಭ್ಯರ್ಥಿಗಳಿಲ್ಲ ಅಲ್ಲಿ ಬೆಂಬಲಿಸುವಂತೆ, ಸಹಕರಿಸುವಂತೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಬಳಿ ಮನವಿ ಮಾಡಿದ್ದೇನೆ, ಅವರು ನೂರಕ್ಕೆ ನೂರು ನಮಗೆ ಸಹಕಾರ ಕೊಡ್ತಾರೆಂಬ ನಂಬಿಕೆ ಇದೆ. ಇನ್ನು ಪ್ರಧಾನಿ ನರೇಂದ್ರ ಮೋದಿಯವರನ್ನು ಎಚ್.ಡಿ.ದೇವೆಗೌಡರು ಭೇಟಿ ಮಾಡಿರುವುದರಲ್ಲಿ ಯಾವುದೇ ರಾಜಕೀಯ ಇಲ್ಲ, ಚುನಾವಣೆಗೂ, ಭೇಟಿಗೂ ಯಾವುದೇ ಸಂಬಂಧ ಇಲ್ಲ ಎಂದು ನುಡಿದರು.

ಪರಿಷತ್ ಚುನಾವಣೆಯಲ್ಲಿ ನಾವು 15 ಸ್ಥಾನ ಗೆಲ್ಲುತ್ತೇವೆ, ಬುದ್ಧಿವಂತ ಮತದಾರರು ನಮ್ಮ ಕೈ ಹಿಡಿಯಲಿದ್ದಾರೆ ಎಂಬ ನಂಬಿಕೆ ಇದೆ. ಕೇವಲ ಹಣದ ಬಲದಿಂದ ಚುನಾವಣೆ ಗೆಲ್ಲುತ್ತೇನೆ ಎಂದಿ ಹೋದ್ರೇ ಅವರು ಬೆಂಗಳೂರಿಗೆ ಹೋಗಬೇಕಾಗುತ್ತದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಸೋಮಶೇಖರ್‍ಗೆ ಟಾಂಗ್ ನೀಡಿದರು.

Facebook Comments