ಪಾಕ್ ನುಸುಳುಕೋರನನ್ನು ಹೊಡೆದುರುಳಿಸಿದ ಭದ್ರತಾ ಪಡೆ

ಈ ಸುದ್ದಿಯನ್ನು ಶೇರ್ ಮಾಡಿ

ಚಂಡೀಘಡ, ಜ.15 ಅಂತಾರಾಷ್ಟ್ರೀಯ ಗಡಿಯನ್ನು ದಾಟಿ ಭಾರತದ ಒಳ ನುಸುಳಲು ಯತ್ನಿಸುತ್ತಿದ್ದ ವ್ಯಕ್ತಿಯನ್ನು ಗುರುತಿಸಿದ ಗಡಿ ಭದ್ರತಾ ಪಡೆ ಹೊಡೆದುರುಳಿಸಿದೆ. ಅಮೃತ್‍ಸರ್ ಜಿಲ್ಲೆಯಲ್ಲಿ ಅಂತಾರಾಷ್ಟ್ರೀಯ ಗಡಿ ರೇಖೆ ಬಳಿ ಪಾಕಿಸ್ತಾನದ ವ್ಯಕ್ತಿಯೊಬ್ಬ ಅನುಮಾಸ್ಪದವಾಗಿ ಓಡಾಡುತ್ತಿದ್ದದ್ದು ಗುರುತಿಸಿದ ಗಡಿ ಭದ್ರತಾ ಪಡೆಯವರು ಅವನ ಚಲನವಲನದ ಮೇಲೆ ಕಣ್ಣಿಟ್ಟಿದ್ದರು.

ಕ್ಷಣಾರ್ಧದಲ್ಲಿ ಕಣ್ತಪ್ಪಿಸಿ ಭಾರತದೊಳಯೊಳಗೆ ನುಗ್ಗಲು ಯತ್ನಿಸಿದ್ದನ್ನು ಪತ್ತೆ ಹಚ್ಚಿದ ನಮ್ಮ ಕಾವಲು ಪಡೆ ಗುಂಡಿಟ್ಟು ಕೊಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗುರುವಾರ ಬೆಳಗ್ಗೆ 8.30ಕ್ಕೆ ಅನುಮಾಸ್ಪದ ವ್ಯಕ್ತಿ ಭಾರತದ ಗಡಿ ಬೇಲಿಯನ್ನು ಕತ್ತರಿಸಲು ಪ್ರಯತ್ನಿಸುತ್ತಿದ್ದಾಗ ಈ ಘಟನೆ ನಡೆದಿದೆ.

Facebook Comments