ಬಿಎಸ್‍ವೈ ಕುಟುಂಬದ ವಿರುದ್ಧ ಸಿಬಿಐ ತನಿಖೆಗೆ ಕೋರಿ ಸಲ್ಲಿಸಿದ್ದ ಅರ್ಜಿ ವಾಪಸ್

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಆ.6- ಮಾಜಿ ಮುಖ್ಯಮಂತ್ರಿ ಬಿಎಸ್‍ವೈ ಹಾಗೂ ಕುಟುಂಬದ ಭ್ರಷ್ಟಾಚಾರ ಪ್ರಕರಣದ ವಿರುದ್ಧ ಸಿಬಿಐ ಅಥವಾ ಎಸ್‍ಐಟಿ ತನಿಖೆ ನಡೆಸಬೇಕೆಂದು ಕೋರಿ ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಾಹಂ ಸಲ್ಲಿಸಿದ್ದ ರಿರ್ಟ್ ಅರ್ಜಿಯನ್ನು ತಾಂತ್ರಿಕ ಕಾರಣದಿಂದ ವಾಪಸ್ ಪಡೆದಿದ್ದಾರೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಅರ್ಜಿಯಲ್ಲಿ ಈಗಾಗಲೇ ಬಿಎಸ್‍ವೈ ಸೇರಿದಂತೆ ಪ್ರತಿವಾದಿಗಳಿಗೆ ಹೈಕೋರ್ಟ್ ನೋಟಿಸ್ ನೀಡಿದ ಹಿನ್ನೆಲೆಯಲ್ಲಿ ಸಿಬಿಐ ತನಿಖೆ ಕೋರಿದ್ದ ರಿಟ್ ಅರ್ಜಿಯನ್ನು ವಾಪಸ್ ಪಡೆದಿದ್ದಾರೆ.

ಈ ಹಿಂದೆ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಅಬ್ರಾಹಂ ಅವರು ಖಾಸಗಿ ದೂರು ಸಲ್ಲಿಸಿದ್ದರು. ಪ್ರಾಸಿಕ್ಯೂಶನ್ ಪೂರ್ವಾನುಮತಿ ನಿರಾಕರಿಸಿದ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ದೂರನ್ನು ವಜಾಗೊಳಿಸಿತ್ತು. ಈ ಆದೇಶ ಪ್ರಶ್ನಿಸಿದ್ದ ಅರ್ಜಿ ಸಂಬಂಧ ಹೈಕೋರ್ಟ್ ಈಗಾಗಲೇ ಪ್ರತಿ ವಾದಿಗಳಿಗೆ ನೋಟಿಸ್ ಜಾರಿ ಮಾಡಿದೆ. ಸಿಬಿಐ ತನಿಖೆಗೆ ಕೋರಿದ್ದ ರಿರ್ಟ್ ಅರ್ಜಿಯನ್ನು ಇಂದು ಅಬ್ರಾಹಂ ವಾಪಸ್ ಪಡೆದರು.

Facebook Comments